July 23, 2026
Thursday, July 23, 2026
spot_img

ರಕ್ಷಣಾ ಕ್ಷೇತ್ರದಲ್ಲಿ ಭಾರತದ ಹೊಸ ಮೈಲಿಗಲ್ಲು: ಪಿಎಂ ಮೋದಿ ಶ್ಲಾಘನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ 135ನೇ ಸಂಚಿಕೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 2026ರ ಮೊದಲಾರ್ಧದಲ್ಲಿ ರಕ್ಷಣೆ, ವಿಮಾನಯಾನ ಮತ್ತು ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ‘ಮೇಕ್ ಇನ್ ಇಂಡಿಯಾ’ ಸಾಧಿಸಿರುವ ಅಭೂತಪೂರ್ವ ಯಶಸ್ಸನ್ನು ಶ್ಲಾಘಿಸಿದ್ದಾರೆ.

ಸ್ವದೇಶಿ ರಕ್ಷಣಾ ಕ್ಷೇತ್ರದ ಮೈಲಿಗಲ್ಲು

ಕೊಲ್ಕತ್ತಾ ಪ್ರವಾಸದ ವೇಳೆ ಸಂಪೂರ್ಣ ಸ್ವದೇಶಿ ತಂತ್ರಜ್ಞಾನದಿಂದ ನಿರ್ಮಾಣಗೊಂಡ ಐಎನ್‌ಎಸ್ ದುನಗಿರಿ, ಐಎನ್‌ಎಸ್ ಸಂಶೋಧಕ್ ಮತ್ತು ಐಎನ್‌ಎಸ್ ಅಗ್ರಾಯ್ ಯುದ್ಧನೌಕೆಗಳನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಿದ್ದನ್ನು ಪ್ರಧಾನಿ ಹೆಮ್ಮೆಯಿಂದ ಸ್ಮರಿಸಿದರು. ಜೊತೆಗೆ, ಜೂನ್‌ನಲ್ಲಿ ಡಿಆರ್‌ಡಿಒ ಯಶಸ್ವಿಯಾಗಿ ಪರೀಕ್ಷಿಸಿದ ಸ್ವದೇಶಿ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಮಿಸೈಲ್ ಮತ್ತು ಭಾರತದಲ್ಲೇ ತಯಾರಾಗುತ್ತಿರುವ 40 C-295 ಸಾರಿಗೆ ವಿಮಾನಗಳ ಪೈಕಿ ಮೊದಲ ವಿಮಾನದ ಯಶಸ್ವಿ ಹಾರಾಟವನ್ನು ರಕ್ಷಣಾ ಕ್ಷೇತ್ರದ ಪ್ರಮುಖ ಮೈಲಿಗಲ್ಲು ಎಂದು ಬಣ್ಣಿಸಿದರು.

ಜನರ ಜವಾಬ್ದಾರಿಗೆ ಪ್ರಧಾನಿ ಕೃತಜ್ಞತೆ

ಪಶ್ಚಿಮ ಏಷ್ಯಾದ ಯುದ್ಧದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಚಿನ್ನದ ಖರೀದಿ ಕಡಿಮೆ ಮಾಡುವಂತೆ ತಾವು ನೀಡಿದ್ದ ಕರೆಗೆ ಓಗೊಟ್ಟ ನಾಗರಿಕರಿಗೆ ಪ್ರಧಾನಿ ಧನ್ಯವಾದ ಅರ್ಪಿಸಿದರು. ಇದರೊಂದಿಗೆ ಇಂಧನ ಉಳಿತಾಯ ಮತ್ತು ಪರಿಸರ ಸಂರಕ್ಷಣೆಗಾಗಿ ಸಾರ್ವಜನಿಕರು ಹೆಚ್ಚಾಗಿ ‘ಕಾರ್‌ಪೂಲಿಂಗ್’ ಪದ್ಧತಿಯನ್ನು ಅಳವಡಿಸಿಕೊಳ್ಳುತ್ತಿರುವುದಕ್ಕೆ ಮೋದಿ ಸಂತಸ ವ್ಯಕ್ತಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !