ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ಯಾರಿಸ್‌ನಲ್ಲಿ ನಡೆದ AI ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.
ಈ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಐ ಫೌಂಡೇಶನ್ ಮತ್ತು ಕೌನ್ಸಿಲ್ ಫಾರ್ ಸಸ್ಟೈನಬಲ್ ಎಐ ಅನ್ನು ಸ್ಥಾಪಿಸುವ ನಿರ್ಧಾರವನ್ನು ಸ್ವಾಗತಿಸಿದ್ದು, ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಎಲ್ಲಾ ಪಾಲುದಾರರಲ್ಲಿ ಏಕತೆ ಇದೆ ಎಂದು ನಂಬುವುದಾಗಿ ಹೇಳಿದ್ದಾರೆ.
ಈ ಉಪಕ್ರಮಗಳಿಗಾಗಿ ಫ್ರಾನ್ಸ್ ಮತ್ತು ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರನ್ನು ನಾನು ಅಭಿನಂದಿಸುತ್ತೇನೆ. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಹಾಗೇ, ಮುಂದಿನ ಜಾಗತಿಕ ಶೃಂಗಸಭೆಯನ್ನು ಭಾರತದಲ್ಲಿ ಆಯೋಜಿಸುತ್ತಿರುವುದು ನಮಗೆ ಸಂತೋಷಕರ ಸಂಗತಿ ಎಂದು ಮೋದಿ ಹೇಳಿದ್ದಾರೆ. ಮುಂದಿನ ವರ್ಷದ ಶೃಂಗಸಭೆ ಭಾರತದ ಯಾವ ಪ್ರದೇಶದಲ್ಲಿ ನಡೆಯಲಿದೆ ಎಂಬುದು ಇನ್ನೂ ಖಚಿತವಾಗಿಲ್ಲ.