OLYMPICS | ಭಾರತದ ಒಲಿಂಪಿಕ್ಸ್ ಅಭಿಯಾನ ಆರಂಭ, ಇಂದು ಆರ್ಚರಿ ಸ್ಪರ್ಧೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತವು ಇಂದಿನಿಂದ ಒಲಿಂಪಿಕ್ಸ್‌ ಅಭಿಯಾನ ಆರಂಭಿಸಲಿದೆ. ಇಂದು ನಡೆಯುವ ಬಿಲ್ಲುಗಾರಿಕೆ (ಆರ್ಚರಿ) ಸ್ಪರ್ಧೆಯಲ್ಲಿ ಭಾರತೀಯ ಕ್ರೀಡಾಪಟುಗಳಾದ ದೀಪಿಕಾ ಕುಮಾರಿ, ಅಂಕಿತಾ ಭಕತ್, ಭಜನ್ ಕೌರ್, ಬಿ ಧೀರಜ್, ತರುಣ್‌ದೀಪ್ ರೈ ಮತ್ತು ಪ್ರವೀಣ್ ಜಾಧವ್ ಸ್ಪರ್ಧಿಸಲಿದ್ದಾರೆ.

ಸ್ಪೋರ್ಟ್ಸ್​ 18 ಚಾನೆಲ್​ನಲ್ಲಿ ಒಲಿಂಪಿಕ್ಸ್​ ಪಂದ್ಯಗಳ ನೇರ ಪ್ರಸಾರವನ್ನು ವೀಕ್ಷಿಸಬಹುದು. ಹಾಗೆಯೇ ಜಿಯೋ ಸಿನಿಮಾ ಆ್ಯಪ್​ನಲ್ಲಿ ಭಾರತದ ಸ್ಪರ್ಧೆಗಳ ಉಚಿತ ಲೈವ್ ಸ್ಟ್ರೀಮಿಂಗ್ ಇರಲಿದೆ.

ಈ ಸ್ಪರ್ಧೆಯೊಂದಿಗೆ ಭಾರತದ ಒಲಿಂಪಿಕ್ಸ್ ಅಭಿಯಾನ ಶುರುವಾಗಲಿದೆ. ವೈಯಕ್ತಿಕ ಶ್ರೇಯಾಂಕ ಸುತ್ತಿನಲ್ಲಿ ಸ್ಪರ್ಧೆ ನಡೆಯಲಿದೆ. ಇದಾದ ಬಳಿಕ ಪುರುಷರ ವೈಯುಕ್ತಿಕ ಶ್ರೇಯಾಂಕ ಸುತ್ತಿನ ಆರ್ಚರಿ ಸ್ಪರ್ಧೆಗಳು ನಡೆಯಲಿವೆ.

ಪ್ಯಾರಿಸ್ 2024 ರಲ್ಲಿ ಭಾರತೀಯ ಬಿಲ್ಲುಗಾರರ ಪದಕದ ಮಹತ್ವಾಕಾಂಕ್ಷೆಗೆ ಇಂದಿನ ಶ್ರೇಯಾಂಕದ ಸುತ್ತು ನಿರ್ಣಾಯಕವಾಗಿರುತ್ತದೆ. ಶ್ರೇಯಾಂಕದ ಸುತ್ತಿನಿಂದ ಅಗ್ರ ನಾಲ್ಕು ಶ್ರೇಯಾಂಕದ ತಂಡಗಳು ನೇರವಾಗಿ ಕ್ವಾರ್ಟರ್ ಫೈನಲ್‌ಗೆ ಮುನ್ನಡೆಯುತ್ತವೆ. ಎಂಟರಿಂದ 12ನೇ ಶ್ರೇಯಾಂಕದ ತಂಡಗಳು ಉಳಿದ ನಾಲ್ಕು ಕ್ವಾರ್ಟರ್-ಫೈನಲ್ ಸ್ಥಾನಗಳಿಗಾಗಿ ಪರಸ್ಪರ ಮುಖಾಮುಖಿಯಾಗಲಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!