ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಚೆಸ್ಟ್ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ವಿಶ್ವದ ನಂ.1 ಚೆಸ್ ಮಾಸ್ಟರ್ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಗೆದ್ದು ಸಂಭ್ರಮಿಸಿದ್ದಾರೆ.
ಬುಧವಾರ ತಡರಾತ್ರಿ ನಡೆದ ನಾರ್ವೆ ಚೆಸ್ ಟೂರ್ನಿಯ 3ನೇ ಸುತ್ತಿನಲ್ಲಿ ಪ್ರಜ್ಞಾನಂದ ಈ ಸಾಧನೆ ಮಾಡಿದ್ದಾರೆ. ಇದು 6 ಬಾರಿ ವಿಶ್ವ ಚೆಸ್ ಚಾಂಪಿಯನ್ ಕಾರ್ಲ್‌ಸನ್ ವಿರುದ್ಧ ಪ್ರಜ್ಞಾನಂದಗೆ ಒಲಿದ ಮೊದಲ ಗೆಲುವು ಸಹ ಆಗಿದೆ.
ಮೂರು ಸುತ್ತಿನ ಬಳಿಕ ಅಂಕಪಟ್ಟಿಯಲ್ಲಿ ಪ್ರಜ್ಞಾನಂದ ಅವರು 5.5 ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನ ಪಡೆದರೆ, ಕಾರ್ಲ್‌ಸನ್ 3 ಪಾಯಿಂಟ್‌ಗಳೊಂದಿಗೆ 5ನೇ ಸ್ಥಾನ ಪಡೆದುಕೊಂಡಿದ್ದಾರೆ.
ಕಳೆದ ವರ್ಷ ಅಝರ್ಬೈಜಾನ್ನ ಬಾಕುವಿನಲ್ಲಿ ನಡೆದಿದ್ದ ಚೆಸ್ ವಿಶ್ವಕಪ್ನ (Chess World Cup 2023) ಫೈನಲ್ ಟೈ ಬ್ರೇಕರ್ ಸುತ್ತಿನಲ್ಲಿ ಪ್ರಜ್ಞಾನಂದ ವಿರುದ್ಧವೇ ಗೆಲುವು ಸಾಧಿಸಿ ಮ್ಯಾಗ್ನಸ್ ಕಾರ್ಲ್‌ಸೆನ್ ಗೆಲುವು ಸಾಧಿಸಿ 6ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ್ದರು. ಭಾರತೀಯ ಚೆಸ್ ಪಟು ಪ್ರಜ್ಞಾನಂದಗೆ ಅಂದು ಸೋಲಾಗಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದ್ದರು.