ಭಾರತದ ಶ್ರೀಮಂತ ವ್ಯಕ್ತಿ ಮುಖೇಶ್‌ ಅಂಬಾನಿಗೆ ಬಂತು ಬೆದರಿಕೆ ಕರೆ !

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಕೈಗಾರಿಕೋದ್ಯಮಿ ಮತ್ತು ಭಾರತದ ಶ್ರೀಮಂತ ವ್ಯಕ್ತಿಯಾದ ರಿಲಯನ್ಸ್‌ ಮಾಲೀಕ ಮುಖೇಶ್‌ ಅಂಬಾನಿ ಹಾಗೂ ಅವರ ಕುಟುಂಬದವರಿಗೆ 3 ಬೆದರಿಕೆ ಕರೆಗಳು ಬಂದಿವೆ. ಮೂಲಗಳ ವರದಿಯ ಪ್ರಕಾರ ರಿಲಯನ್ಸ್ ಫೌಂಡೇಶನ್‌ನ ಹರ್ಸ್ಕಿಸಂದಾಸ್ ಆಸ್ಪತ್ರೆಯ ಸಂಖ್ಯೆಗೆ ಬೆದರಿಕೆ ಕರೆಗಳು ಬಂದಿವೆ ಎನ್ನಲಾಗಿದೆ.

ಈ ಕುರಿತು ಡಿಬಿ ಮಾರ್ಗ ಪೋಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು ಘಟನೆಗೆ ಸಂಬಂಧಿಸಿದ ಮಾಹಿತಿ ಕಲೆ ಹಾಕುತ್ತಿದ್ದಾರೆ. “ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಕರೆಗಳ ಬಗ್ಗೆ ರಿಲಯನ್ಸ್ ಫೌಂಡೇಶನ್ ದೂರು ದಾಖಲಿಸಿದೆ. ಆಸ್ಪತ್ರೆಗೆ ಮೂರಕ್ಕೂ ಹೆಚ್ಚು ಕರೆಗಳು ಬಂದಿವೆ. ತನಿಖೆ ನಡೆಯುತ್ತಿದೆ.” ಎಂದು ಪೋಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸ ‘ಆಂಟಿಲ್ಲಾʼದ ಹೊರಗೆ 20 ಸ್ಫೋಟಕ ಜಿಲೆಟಿನ್ ಕಡ್ಡಿಗಳು ಮತ್ತು ಬೆದರಿಕೆ ಪತ್ರವಿರುವ ಸ್ಕಾರ್ಪಿಯೋ ಕಾರು ಪತ್ತೆಯಾಗಿತ್ತು. ಪ್ರಸ್ತುತ ರಿಲಯನ್ಸ್‌ ಫೌಂಡೇಶನ್‌ ಆಸ್ಪತ್ರೆಗೆ ಬೆದರಿಕೆ ಕರೆಗಳು ಬಂದಿವೆ ಎನ್ನಲಾಗುತ್ತಿದ್ದು ತನಿಖೆ ನಡೆಯುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!