Wednesday, February 28, 2024

ಭಾರತದ ಹಿರಿಯ ​ಟೆಸ್ಟ್ ಕ್ರಿಕೆಟಿಗ ದತ್ತಾಜಿರಾವ್​ ಗಾಯಕ್ವಾಡ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಕ್ರಿಕೆಟ್ ತಂಡದ ದಿಗ್ಗಜ ಹಾಗೂ ಮಾಜಿ ನಾಯಕ ದತ್ತಾಜಿರಾವ್ ಗಾಯಕ್ವಾಡ್ (95) ವಿಧಿವಶರಾಗಿದ್ದಾರೆ.

ದತ್ತಾಜಿರಾವ್ ಅವರು ಭಾರತೀಯ ರಾಷ್ಟ್ರೀಯ ತಂಡದ ಮಾಜಿ ಮುಖ್ಯ ಕೋಚ್ ಔನ್ಶುಮಾನ್​ ಗಾಯಕ್ವಾಡ್ ಅವರ ತಂದೆ. ಕಳೆದ 12 ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬರೋಡಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮುಂಜಾನೆ ಅವರು ನಿಧನರಾಗಿದ್ದಾರೆ.

ದತ್ತಾಜಿರಾವ್ ಗಾಯಕ್ವಾಡ್ ಅವರು 1952 ಮತ್ತು 1961 ರ ನಡುವೆ ಭಾರತಕ್ಕಾಗಿ ಹನ್ನೊಂದು ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಅವರು 1959 ರ ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ ಭಾರತ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!