Thursday, March 23, 2023

Latest Posts

ಭಾರತದ ಪರಿಸ್ಥಿತಿ ಪಾಕಿಸ್ತಾನದಂತೆಯೇ ಇದೆ: ಮುಫ್ತಿ ವಿವಾದಿತ ಹೇಳಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌
 
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ವಿವಾದಿತ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೆಹಬೂಬಾ ಮುಫ್ತಿ, ಪಾಕಿಸ್ತಾನದಲ್ಲಿ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿದೆ. ಇದು ಅತ್ಯಂತ ಕೆಟ್ಟ ವಿಚಾರ. ನಮ್ಮ ದೇಶದಲ್ಲಿ ಸರ್ಕಾರದ ಆದೇಶದೊಂದಿಗೆ ಮಾಜಿ ಮಂತ್ರಿಗಳು ಹಾಗೂ ಹಾಲಿ ಮಂತ್ರಿಗಳನ್ನು ಜೈಲಿಗೆ ಅಟ್ಟುವ ಪ್ರಯತ್ನಗಳು ನಡೆಯುತ್ತಿದೆ ಎಂದು ಹೇಳಿದ್ದಾರೆ. ಈ ಅರ್ಥದಲ್ಲಿ ನೋಡುವುದಾದರೆ, ಭಾರತದ ಪರಿಸ್ಥಿತಿ ಕೂಡ ಪಾಕಿಸ್ತಾನದಂತೆಯೇ ಇದೆ. ನಮ್ಮ ದೇಶದಲ್ಲಿ ಇಡಿ, ಸಿಬಿಐನಂಥ ಏಜೆನ್ಸಿಗಳನ್ನು ದೇಶದಲ್ಲಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ದೆಹಲಿಯ ಉಪಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ, ಕೆಸಿಆರ್‌ ಅವರ ಪುತ್ರಿ ಕೆ.ಕವಿತಾ ಅವರನ್ನು ಸರ್ಕಾರ ಯಾವ ರೀತಿಯಲ್ಲಿ ಟಾರ್ಗೆಟ್‌ ಮಾಡುತ್ತಿದೆ ಎಂದು ಎಲ್ಲರೂ ನೋಡುತ್ತಿದ್ದಾರೆ. ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬವೂ ಏಜೆನ್ಸಿಗಳ ಗುರಿಯಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!