ಆಸ್ಟ್ರೇಲಿಯಾ ವಿರುದ್ದದ ಮೂರನೇ ಮ್ಯಾಚ್ ಗೆ ಇಂಡಿಯಾದ ಸ್ಟಾರ್ ಆಟಗಾರ ಔಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಏಕದಿನ ಪಂದ್ಯದಿಂದ ಟೀಮ್ ಇಂಡಿಯಾದ ಆಲ್​ರೌಂಡರ್ ಅಕ್ಷರ್ ಪಟೇಲ್ ಹೊರಗುಳಿದಿದ್ದಾರೆ.

ಗಾಯದ ಕಾರಣ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ಅಕ್ಷರ್ ರಾಜ್​ಕೋಟ್​ನಲ್ಲಿ ನಡೆಯಲಿರುವ ಮೂರನೇ ಪಂದ್ಯದ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಅಂತಿಮ ಏಕದಿನ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಇತ್ತ ಏಕದಿನ ವಿಶ್ವಕಪ್​ಗೂ ಮುನ್ನ ಅಕ್ಷರ್ ಪಟೇಲ್ ಗಾಯಗೊಂಡಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.
ದಾಗ್ಯೂ ಅವರನ್ನು ವಿಶ್ವಕಪ್​ ತಂಡದಿಂದ ಕೈ ಬಿಡಲಾಗಿಲ್ಲ. ಬದಲಾಗಿ ಏಕದಿನ ವಿಶ್ವಕಪ್​ನ ಅಭ್ಯಾಸ ಪಂದ್ಯಗಳವರೆಗೆ ಕಾದು ನೋಡಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ. ಭಾರತ ತಂಡವು ಸೆಪ್ಟೆಂಬರ್ 30 ರಂದು ಇಂಗ್ಲೆಂಡ್ ವಿರುದ್ಧ ಹಾಗೂ ಅಕ್ಟೋಬರ್ 3 ರಂದು ನೆದರ್​ಲೆಂಡ್ಸ್​ ವಿರುದ್ಧ ಅಭ್ಯಾಸ ಪಂದ್ಯವನ್ನಾಡಲಿದೆ. ಈ ವೇಳೆಗೆ ಅಕ್ಷರ್ ಚೇತರಿಸಿಕೊಳ್ಳದಿದ್ದರೆ ತಂಡದಿಂದ ಹೊರಬೀಳುವುದು ಖಚಿತ.

ಬದಲಿ ಆಟಗಾರ ಯಾರು?
ಒಂದು ವೇಳೆ ಅಕ್ಷರ್ ಪಟೇಲ್ ವಿಶ್ವಕಪ್ ತಂಡದಿಂದ ಹೊರಬಿದ್ದರೆ, ರವಿಚಂದ್ರನ್ ಅಶ್ವಿನ್​ಗೆ ಸ್ಥಾನ ಸಿಗುವುದು ಖಚಿತ ಎನ್ನಬಹುದು. ಇದೇ ಕಾರಣದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಅಶ್ವಿನ್ ಅವರನ್ನು ಆಯ್ಕೆ ಮಾಡಲಾಗಿದೆ.

ರಾಜ್​ಕೋಟ್​ನಲ್ಲಿ ನಡೆಯಲಿರುವ 3ನೇ ಏಕದಿನ ಪಂದ್ಯದಿಂದ ಟೀಮ್ ಇಂಡಿಯಾ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಹಾಗೂ ಆಲ್​ರೌಂಡರ್ ಶಾರ್ದೂಲ್ ಠಾಕೂರ್​ಗೆ ವಿಶ್ರಾಂತಿ ನೀಡಲಾಗಿದೆ. ಈ ಪಂದ್ಯದ ವೇಳೆಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಹಾಗೂ ಜಸ್​ಪ್ರೀತ್ ಬುಮ್ರಾ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಹೀಗಾಗಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!