Thursday, September 18, 2025

ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತದ ಬೆಂಬಲ: ಪುಟಿನ್​ಗೆ ಪ್ರಧಾನಿ ಮೋದಿ ಸಂದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತದ ಬೆಂಬಲ ನೀಡಲು ಸಿದ್ದ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಕ್ಕಾಗಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಎರಡೂ ದೇಶಗಳ ಸಂಬಂಧಗಳನ್ನು ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ದೂರವಾಣಿ ಕರೆ ಮತ್ತು ಶುಭಾಶಯಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.’ನನ್ನ ಸ್ನೇಹಿತರಾದ ರಷ್ಯಾ ಅಧ್ಯಕ್ಷ ಪುಟಿನ್, ನನ್ನ 75ನೇ ಹುಟ್ಟುಹಬ್ಬದಂದು ನಿಮ್ಮ ಫೋನ್ ಕರೆ ಮತ್ತು ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು. ನಮ್ಮ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತ ಸಾಧ್ಯವಿರುವ ಎಲ್ಲಾ ಕೊಡುಗೆಗಳನ್ನು ನೀಡಲು ಸಿದ್ಧವಾಗಿದೆ’ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ