ಭಾರತದ ಟಾಪ್ 10 ಹಿರೋ ಪಟ್ಟಿ ರಿಲೀಸ್: ಮತ್ತೆ ದಕ್ಷಿಣ ಭಾರತದ ಸ್ಟಾರ್ ‌ನಟರೇ ಟಾಪರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತದ ಸಿನಿಮಾ ರಂಗದಲ್ಲಿ ದಕ್ಷಿಣ ಭಾರತದ ಚಿತ್ರಗಳು ಭಾರಿ ಸದ್ದು ಮಾಡುತ್ತಿದೆ. ಇತ್ತೀಚೆಗೆ ಬಿಡುಗಡೆಯಾಗುತ್ತಿರುವ ದಕ್ಷಿಣ ಭಾರತದ ಚಿತ್ರಗಳು ಬಹುತೇಕ ಪ್ಯಾನ್ ಇಂಡಿಯಾ ಚಿತ್ರಗಳಾಗಿವೆ. ಇವುಗಳ ಮುಂದೆ ಬಾಲಿವುಡ್ ಚಿತ್ರಗಳು ಹರಸಾಹಸ ಪಡುತ್ತಿದೆ. ಈ ಹೊಡೆತದಿಂದ ಮೇಲೇಳಲು ಪರದಾಡುತ್ತಿರುವ ಬಾಲಿವುಡ್‌ಗೆ ಮತ್ತೊಂದು ಆಘಾತ ಎದುರಾಗಿದೆ.

ಕಾರಣ , ಆರ್ಮ್ಯಾಕ್ಸ್ ಭಾರತದ ಟಾಪ್ 10 ಹೀರೋ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಟಾಪ್ 5ರಲ್ಲಿ ದಕ್ಷಿಣ ಭಾರತದ ನಟರೇ ಕಾಣಿಸಿಕೊಂಡಿದ್ದಾರೆ. ಕೆಜಿಎಫ್ ಮೂಲಕ ದೇಶ ವಿದೇಶಗಳಲ್ಲಿ ಸಿನಿಮಾ ಕ್ರೇಜ್ ಹೆಚ್ಚಿಸಿದ ಯಶ್, ಬಾಲಿವುಡ್ ನಟ ಅಕ್ಷಯ್ ಕುಮಾರ್, ತೆಲುಗು ನಟ ಮಹೇಶ್ ಬಾಬು, ತಮಿಳು ನಟ ಸೂರ್ಯ ಸೇರಿದಂತೆ ಹಲವು ದಿಗ್ಗಜರನ್ನೇ ಹಿಂದಿಕ್ಕಿದ್ದಾರೆ.

ಆರ್ಮ್ಯಾಕ್ಸ್ ಬಿಡುಗಡೆ ಮಾಡಿರುವ ಭಾರತದ ಟಾಪ್ 10 ಹೀರೋಗಳ ಪಟ್ಟಿಯಲ್ಲಿ ತಮಿಳು ಸ್ಟಾರ್ ವಿಜಯ್ ದಳಪತಿ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ಎರಡನೇ ಸ್ಥಾನದಲ್ಲಿ ಬಾಹುಬಲಿ ಹೀರೋ ಪ್ರಭಾಸ್ ವಿರಾಜಮಾನರಾಗಿದ್ದಾರೆ. ತೆಲುಗು ಸ್ಟಾರ್ ಜ್ಯೂನಿಯರ್ ಎನ್‌ಟಿಆರ್ ಮೂರನೇ ಸ್ಥಾನ ಅಲಂಕರಿಸಿದ್ದಾರೆ. ಪುಷ್ಪ ಖ್ಯಾತಿಯ ಅಲ್ಲು ಅರ್ಜುನ್ ನಾಲ್ಕನೇ ಸ್ಥಾನದಲ್ಲಿದ್ದರೆ, ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ 5ನೇ ಸ್ಥಾನ ಅಲಂಕರಿಸಿದ್ದಾರೆ.

ಆರ್ಮ್ಯಾಕ್ಸ್ ಬಿಡುಗಡೆ ಮಾಡಿದ ಭಾರತದ ಟಾಪ್ 10 ಹೀರೋಗಳ ಪಟ್ಟಿ ವಿವರ:
1. ವಿಜಯ್ ದಳಪತಿ
2. ಪ್ರಭಾಸ್
3. ಜ್ಯೂ.ಎನ್‌ಟಿಆರ್
4. ಅಲ್ಲು ಅರ್ಜುನ್
5. ಯಶ್
6. ಅಕ್ಷಯ್ ಕುಮಾರ್
7. ರಾಮ್ ಚರಣ್
8. ಮಹೇಶ್ ಬಾಬು
9. ಸೂರ್ಯ
10. ಅಜಿತ್ ಕುಮಾರ್

ಇನ್ನು 6ನೇ ಸ್ಥಾನದಲ್ಲಿರುವ ಅಕ್ಷಯ್ ಕುಮಾರ್ ಈ ಪಟ್ಟಿಯಲ್ಲಿ ಕಾಣಿಸಿಕೊಂಡ ಏಕೈಕ ಬಾಲಿವುಡ್ ಸ್ಟಾರ್. ಇನ್ನುಳಿದ 4 ಸ್ಥಾನಗಳು ಮತ್ತೆ ದಕ್ಷಿಣ ಭಾರತದ ಹೀರೋಗಳೇ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!