Monday, December 11, 2023

Latest Posts

ಇಸ್ರೇಲ್ ವಸಾಹತು ಧೋರಣೆ ವಿರುದ್ಧದ ವಿಶ್ವಸಂಸ್ಥೆ ನಿರ್ಣಯಕ್ಕೆ ಭಾರತದ ಮತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ವಸಾಹತು ಧೋರಣೆಯನ್ನು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ.

ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಮತ್ತು ಆಕ್ರಮಿತ ಸಿರಿಯನ್ ಗೋಲನ್‌ನಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಲಾಯಿತು. ಇದನ್ನು ಏಳು ದೇಶಗಳು ವಿರೋಧಿಸಿದ್ದು, ಹದಿನೆಂಟು ದೇಶಗಳು ಮತದಾನದಿಂದ ದೂರ ಉಳಿದವು.

ಈ ಹಿಂದೆ ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ತಕ್ಷಣದ ಹಾಗೂ ನಿರಂತರ ಮಾನವೀಯ ಒಪ್ಪಂದಕ್ಕೆ ಕರೆ ನೀಡುವ ಯುಎನ್ ನಿರ್ಣಯದ ಮೇಲೆ ಭಾರತವು ಮತದಾನದಿಂದ ದೂರ ಉಳಿದಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!