October 12, 2026
Monday, October 12, 2026
spot_img

ಮತ್ತೆ 400 ವಿಮಾನಗಳ ಹಾರಾಟ ರದ್ದುಪಡಿಸಿದ ಇಂಡಿಗೋ ಏರ್‌ಲೈನ್ಸ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗುರುವಾರ ಬೆಂಗಳೂರು ಸೇರಿ ದೇಶದ ಹಲವೆಡೆ 500ಕ್ಕೂ ಅಧಿಕ ವಿಮಾನಗಳನ್ನು ರದ್ದುಗೊಳಿಸಿದ್ದ ಇಂಡಿಗೋ, ಶುಕ್ರವಾರ ಮತ್ತೆ 400 ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಆಗಮನ ಮತ್ತು ನಿರ್ಗಮನ ಸೇರಿದಂತೆ 220 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 100 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೈದರಾಬಾದ್ ವಿಮಾನ ನಿಲ್ದಾಣದಲ್ಲಿಯೂ 90 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದು, ವಿಮಾನಯಾನ ಸಂಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ತಮ್ಮ ಲಗೇಜ್‌ ಪಡೆಯಲು 12 ಗಂಟೆಗಳಿಗೂ ಹೆಚ್ಚು ಕಾಲ ಪರದಾಡುವಂತಿದ್ದು, ಕೆಲವರು ಆಹಾರ ಮತ್ತು ನೀರಿನ ಕೊರತೆ ಎದುರಿಸಿದ್ದಾರೆಂದು ತಿಳಿದುಬಂದಿದೆ. ಇಂಡಿಗೋ ಆರಂಭವಾಗಿ 20 ವರ್ಷವಾದರೂ, ಅದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ರದ್ದಾಗಿದೆ.

ಸತತ ನಾಲ್ಕನೇ ದಿನವೂ ಕಾರ್ಯಾಚರಣೆಯ ಅಡೆತಡೆಗಳು ಇಂಡಿಗೋ ಏರ್‌ಲೈನ್‌ನಲ್ಲಿ ಮುಂದುವರಿದಿದ್ದು, ಪೈಲಟ್‌ ನಿಯೋಜನೆಯಲ್ಲಿ ಸಮಸ್ಯೆಗಳು ಮತ್ತು ತಾಂತ್ರಿಕ ಅಡಚಣೆಗಳು ಸೇರಿದಂತೆ ಹಲವು ಅಂಶಗಳು ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

Must Read