September 30, 2026
Wednesday, September 30, 2026
spot_img

ಇಂಡಿಗೋ ವಿಮಾನ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಿಇಒ ಪೀಟರ್ ಎಲ್ಬರ್ಸ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಇಂಡಿಗೋ ಸಂಸ್ಥೆ ತನ್ನ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಕಾರ್ಯಾಚರಣೆ ಬಿಕ್ಕಟ್ಟನ್ನು ಎದುರಿಸಿತ್ತು. ಆ ಸಮಯದಲ್ಲಿ ವಿಮಾನಗಳ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾಗಿ, ಸಾವಿರಾರು ಪ್ರಯಾಣಿಕರು ಏರ್‌ಪೋರ್ಟ್‌ಗಳಲ್ಲೇ ಸಿಲುಕಿ ಪರದಾಡಿದ್ದರು. ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಸಿಇಒ ರಾಜೀನಾಮೆ ನೀಡಿದ್ದಾರೆ.

ಪೀಟರ್ ಎಲ್ಬರ್ಸ್ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ. ಇಂಡಿಗೋ ಬೋರ್ಡ್ ಈ ರಾಜೀನಾಮೆಯನ್ನು ಅಂಗೀಕರಿಸಿದೆ. 202ರಲ್ಲಿ ಇಂಡಿಗೋ ಸಂಸ್ಥೆಯ ಸಿಇಒ ಒಗಿ ಪೀಟರ್ ಜವಾಬ್ದಾರಿ ವಹಿಸಿಕೊಂಡಿದ್ದರು. ಪೀಟರ್ ಸೇವೆಗೆ ಇಂಡಿಗೋ ಧನ್ಯವಾದ ಹೇಳಿದೆ.

ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆಯಿಂದ ತೆರವಾದ ಸಿಇಒ ಸ್ಥಾನಕ್ಕೆ ಮಧ್ಯಂತರ ಸಿಇಒ ಆಗಿ ರಾಹುಲ್ ಭಾಟಿಯಾ ನೇಮಕಗೊಂಡಿದ್ದಾರೆ.

Must Read