ಅಹಮಾದಾಬಾದ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ಏರ್‌ಲೈನ್ಸ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸೂರತ್‌ನಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನವು ಹಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ ಅಹಮದಾಬಾದ್‌ ನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಭಾನುವಾರ ನಡೆದಿದೆ.

ಇಂಡಿಗೋ A320 ವಿಮಾನ VT-IZI ಆಪರೇಟಿಂಗ್ ಫ್ಲೈಟ್ 6E-646 (ಸೂರತ್ – ದೆಹಲಿ) ಸೂರತ್‌ನಲ್ಲಿ ಆರೋಹಣ ಮಾಡುವಾಗ ಹಕ್ಕಿ ಡಿಕ್ಕಿ ಹೊಡೆದ ಕಾರಣದಿಂದಾಗಿ ಅಹಮದಾಬಾದ್‌ಗೆ ತಿರುಗಿಸಲಾಗಿದೆ. ವಿಮಾನವು ಅಹಮದಾಬಾದ್‌ನಲ್ಲಿ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ ಎಂದಿದೆ ತಿಳಿದುಬಂದಿದೆ.

ಡಿಜಿಸಿಎ ಅಧಿಕೃತ ಹೇಳಿಕೆಯ ಪ್ರಕಾರ, ನೆಲದ ತಪಾಸಣೆಯ ಸಮಯದಲ್ಲಿ ಎಂಜಿನ್ ಫ್ಯಾನ್ ಬ್ಲೇಡ್‌ಗಳು ಹಾನಿಗೊಳಗಾಗಿರುವುದನ್ನು ಗಮನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!