ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್‌ ಮೆ ಬಾಂಬ್ ಹೈ: ಬೆಂಗಳೂರು ಏರ್ ಪೋಟ್೯ಗೆ ಟಿಶ್ಯೂ ಥ್ರೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟಾಯ್ಲೆಟ್ ಟಿಶ್ಯೂನಲ್ಲಿ ಬಾಂಬ್ ಸ್ಪೋಟದ ಬೆದರಿಕೆ ಬರೆದು ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೋ ವಿಮಾನ ಭಾನುವಾರ ರಾತ್ರಿ ಇಳಿಯುವ ಮುನ್ನ ವಿಮಾನದಲ್ಲಿ ಬಾಂಬ್ ಇರುವುದಾಗಿ ಟಾಯ್ಲೆಟ್‌ನಲ್ಲಿ ಟಿಶ್ಯೂ ಪೇಪರ್‌ ಮೇಲೆ ಗೀಚಿದ ಸಂದೇಶ ಪತ್ತೆಯಾಗಿದ್ದು, ಅತಂಕಕ್ಕೆ ಕಾರಣವಾಗಿತ್ತು.

ವಿಮಾನದ ಹಿಂಭಾಗದ ಶೌಚಾಲಯದಲ್ಲಿ ಟಿಶ್ಯೂ ಪೇಪರ್‌ ಬಿದ್ದಿದ್ದನ್ನು ಕ್ಯಾಬಿನ್ ಸಿಬ್ಬಂದಿ ಗಮನಿಸಿದ್ದು, ಇದರಲ್ಲಿ ‘ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್‌ ಮೆ ಬಾಂಬ್ ಹೈ’ (ವಿಮಾನವನ್ನು ಇಳಿಸಬೇಡಿ, ಇದರಲ್ಲಿ ಬಾಂಬ್ ಇದೆ) ಎಂದು ಬರೆದಿತ್ತು ಎಂದು ಭದ್ರತಾ ಅಧಿಕಾರಿ ತಿಳಿಸಿದ್ದಾರೆ.

ತಕ್ಷಣ ಕ್ಯಾಪ್ಟನ್, ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳನ್ನು ಸಂಪರ್ಕಿಸಿ, ಅನುಮತಿ ಪಡೆದು ಬಳಿಕ ವಿಮಾನವನ್ನು ಇಳಿಸಿದ್ದಾರೆ. ತನಿಖೆ ಸಂದರ್ಭ ಇದು ಹುಸಿ ಬಾಂಬ್ ಸಂದೇಶ ಎಂಬುದು ಸ್ಪಷ್ಟವಾಗಿದೆ. ಈ ವಿಮಾನದಲ್ಲಿ 175 ಪ್ರಯಾಣಿಕರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!