ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಿಂದ ಲೇಹ್‌ಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ದೆಹಲಿಯಲ್ಲೇ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಇಂಡಿಗೋ ವಿಮಾನ 6E 2006 ಗುರುವಾರ ದೆಹಲಿಯಿಂದ ಲೇಹ್‌ಗೆ ಹೊರಟಿತ್ತು.ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಮಾನದಲ್ಲಿ 180 ಪ್ರಯಾಣಿಕರಿದ್ದರು, ಎಲ್ಲರೂ ಸುರಕ್ಷಿತವಾಗಿದ್ದಾರೆ.
ವಿಮಾನ ತುರ್ತು ಭೂಸ್ಪರ್ಶದ ನಂತರ, ಇಂಡಿಗೋದಿಂದ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ವಿಮಾನದಲ್ಲಿ ಯಾವ ತಾಂತ್ರಿಕ ದೋಷ ಕಂಡುಬಂದಿದೆ ಎಂಬುದರ ಕುರಿತು ಇಂಡಿಗೋ ಇನ್ನೂ ಯಾವುದೇ ಮಾಹಿತಿಯನ್ನು ನೀಡಿಲ್ಲ.