ಹೊಸದಿಗಂತ ಡಿಜಿಟಲ್ ಡೆಸ್ಕ್ :
ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ತಾಂತ್ರಿಕ ಸಮಸ್ಯೆಯಿಂದಾಗಿ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶಿಸಿದೆ.
ಮಂಗಳವಾರ ಬೆಳಗ್ಗೆ 6.15ಕ್ಕೆ ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹೊರಡಿಸಿದ ಹೇಳಿಕೆ ಪ್ರಕಾರ, ವಿಮಾನದಲ್ಲಿ 137 ಮಂದಿ ಯಾಣಿಸುತ್ತಿದ್ದರು. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.