ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: 40 ನಿಮಿಷ ಆಕಾಶದಲ್ಲೇ ಗಿರಕಿ ಹೊಡೆದ ಫ್ಲೈಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ತಿರುಪತಿಯಿಂದ ಹೈದರಾಬಾದ್‌ಗೆ ಹೋಗುತ್ತಿದ್ದ ಇಂಡಿಗೋ ವಿಮಾನ ತಾಂತ್ರಿಕ ದೋಷದಿಂದ ಸುಮಾರು 40 ನಿಮಿಷಗಳ ಕಾಲ ಆಕಾಶದಲ್ಲೇ ಸುತ್ತಾಡಿದೆ.

ಏರ್‌ಬಸ್ A321neo ವಿಮಾನ ಭಾನುವಾರ ಸಂಜೆ 7:42 ರ ಸುಮಾರಿಗೆ ತಿರುಪತಿ ವಿಮಾನ ನಿಲ್ದಾಣದಿಂದ ಹೊರಟಿತ್ತು. ಈ ವೇಳೆ, ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಬಳಿಕ 40 ನಿಮಿಷಗಳ ಕಾಲ ವಿಮಾನ ಆಕಾಶದಲ್ಲೇ ಸುತ್ತಾಡಿ, ರಾತ್ರಿ 8:34ರ ಸುಮಾರಿಗೆ ತಿರುಪತಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ.

ಇದರಿಂದಾಗಿ ಹೈದರಾಬಾದ್‌ಗೆ ನಿಗದಿಪಡಿಸಲಾದ ಕೊನೆಯ ವಿಮಾನವನ್ನು ರದ್ದುಗೊಳಿಸಲಾಯಿತು. ವಿಮಾನ ರದ್ದಾದ ವಿಚಾರಕ್ಕೆ ಪ್ರಯಾಣಿಕರು, ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ್ದಾರೆ. ಸಿಬ್ಬಂದಿ ಹಾಗೂ ಪ್ರಯಾಣಿಕರ ನಡುವಿನ ವಾಗ್ವಾದದ ವಿಡಿಯೋ ವೈರಲ್‌ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!