October 18, 2026
Sunday, October 18, 2026
spot_img

ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಹಾರಾಟ ಶೀಘ್ರವೇ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ದೇಶದ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ ಏಪ್ರಿಲ್ ಅಂತ್ಯಕ್ಕೆ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ.

ಮೇ.1ರಿಂದ ಶಿವಮೊಗ್ಗದಿಂದ ಇಂಡಿಗೋ ವಿಮಾನ ಸಂಚಾರ ಸೇವೆ ಸ್ಥಗಿತಗೊಳ್ಳುತ್ತದೆ ಎಂದು ಹೇಳಲಾಗಿದೆ. ಏಪ್ರಿಲ್‌ ಕಡೆಯವರೆಗೆ ಮಾತ್ರ ಬುಕ್ಕಿಂಗ್‌ ಲಭ್ಯವಿದೆ.

ಇತ್ತೀಚೆಗೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದ ಹಿನ್ನೆಲೆ ಡಿಜಿಸಿಎ ವಿಮಾನಯಾನ ನಿಯಮಗಳನ್ನು ಅತ್ಯಂತ ಕಠಿಣಗೊಳಿಸಿದೆ. ಹೊಸ ನಿಯಮಗಳಿಂದಾಗಿ ಇಂಡಿಗೋ ಸಂಸ್ಥೆಗೆ ಪೈಲಟ್‌ಗಳು ಕೊರತೆ ಎದುರಾಗಿದೆ. ಈ ತಾಂತ್ರಿಕ ಕಾರಣದಿಂದಾಗಿ ಸಂಸ್ಥೆಯು ಸಣ್ಣ ನಗರಗಳಿಗೆ ನೀಡುತ್ತಿದ್ದ ಎಟಿಆರ್ ವಿಮಾನ ಸೇವೆಗಳನ್ನು ಕಡಿತಗೊಳಿಸಲು ಮುಂದಾಗಿದೆ.

ಇಂಡಿಗೋ ಏರ್‌ಲೈನ್ಸ್ ಮೇ 1ರಿಂದ ಶಿವಮೊಗ್ಗ ಮತ್ತು ಬೆಂಗಳೂರು ನಡುವಿನ ವಿಮಾನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ. ಇದು ತಾತ್ಕಾಲಿಕ ಅಷ್ಟೇ ಮೇ ನಂತರ ಮಳೆಗಾಲ ಇದೆ. ಇದು ಆಫ್‌ ಸೀಸನ್‌ ಹೆಚ್ಚು ಮಂದಿ ಓಡಾಡೋದಿಲ್ಲ. ಹೀಗಾಗಿ ಯಾವುದೇ ತೊಂದರೆ ಆಗೋದಿಲ್ಲ ಎಂದು ಅದಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Must Read