ಭಾರತದ ದೇಶೀಯ ವಿಮಾನಯಾನ ಸಂಸ್ಥೆಯಾದ ಸ್ಪೈಸ್‌ಜೆಟ್ ಸದ್ಯ ಚಳಿಗಾಲದ ವೇಳಾಪಟ್ಟಿಯಲ್ಲಿ ಪ್ರತಿದಿನ 100 ಹೆಚ್ಚುವರಿ ವಿಮಾನಗಳನ್ನು ಸೇರಿಸಲು ಯೋಜಿಸಿದೆ. ಇಂಡಿಗೋ ವಿಮಾನ ಸೇವೆಯಲ್ಲಿನ ಅಡಚಣೆಯ ನಡುವೆ ತನ್ನ ಕಾರ್ಯಾಚರಣೆಯನ್ನು ಹೆಚ್ಚಿಸಲು ಮತ್ತು ವಾಯುಯಾನ ಮಾರುಕಟ್ಟೆಯಲ್ಲಿ ತನ್ನ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳುವ ಗುರಿಯನ್ನು ಇದುಹೊಂದಿದೆ.
ಈ ಚಳಿಗಾಲದಲ್ಲಿ ಪ್ರಮುಖ ಮಾರ್ಗಗಳಲ್ಲಿ ವಿಮಾನ ಪ್ರಯಾಣಕ್ಕೆ ಬೇಡಿಕೆ ಹೆಚ್ಚಾಗುತ್ತಿದ್ದು, ತನ್ನ ಯೋಜನೆಯ ಭಾಗವಾಗಿ ವಿಮಾನಯಾನ ಸಂಸ್ಥೆಯು ಪ್ರತಿದಿನ 100 ಹೆಚ್ಚುವರಿ ವಿಮಾನಗಳ ಸಂಚಾರವನ್ನು ಪ್ರಾರಂಭಿಸುತ್ತಿರುವುದಾಗಿ ಸ್ಪೈಸ್‌ಜೆಟ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
‘ಈ ಚಳಿಗಾಲದಲ್ಲಿ ಪ್ರಮುಖ ಮಾರ್ಗಗಳಲ್ಲಿ ಹೆಚ್ಚಿನ ಜನರಿಂದ ನಾವು ಬಲವಾದ ಮತ್ತು ಬೆಳೆಯುತ್ತಿರುವ ಬೇಡಿಕೆಯನ್ನು ಕಾಣುತ್ತಿದ್ದೇವೆ ಮತ್ತು ಭಾರತದ ವಾಯುಯಾನ ಮಾರುಕಟ್ಟೆಯಲ್ಲಿ ಸಾಕಷ್ಟು ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುವ ಸಲುವಾಗಿ ನಮ್ಮ ವಿಮಾನಗಳ ಕಾರ್ಯಾಚರಣೆಗಳನ್ನು ಹೆಚ್ಚಿಸಲು ಎದುರು ನೋಡುತ್ತಿದ್ದೇವೆ. ಈ ಪ್ರಯತ್ನದ ಭಾಗವಾಗಿ, ನಿಯಂತ್ರಕ ಅನುಮೋದನೆಗಳಿಗೆ ಒಳಪಟ್ಟು ಪ್ರತಿದಿನ 100 ಹೆಚ್ಚುವರಿ ವಿಮಾನಗಳ ಹಾರಾಟವನ್ನು ಪರಿಚಯಿಸಲು ನಾವು ಯೋಜಿಸಿದ್ದೇವೆ’ ಎಂದು ಸ್ಪೈಸ್‌ಜೆಟ್ ಹೇಳಿದೆ.
ವಿಮಾನಯಾನ ಸಂಸ್ಥೆಯು 17 ವಿಮಾನಗಳನ್ನು ಮತ್ತೆ ಸಕ್ರಿಯ ಸೇವೆಗೆ ತಂದಿದೆ. ಈ ಪೈಕಿ ಕೆಲವು ಭಾಗಶಃ ಸಿಬ್ಬಂದಿಯೊಂದಿಗೆ ಗುತ್ತಿಗೆ (damp-leased) ಪಡೆದ ವಿಮಾನಗಳು ಸೇರಿವೆ. ಈ ಮೂಲಕ, ಅನೇಕ ಪ್ರಯಾಣಿಕರು ಪ್ರಯಾಣಿಸಲು ಬಯಸುವ ಮಾರ್ಗಗಳಲ್ಲಿ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸುವುದು ನಮ್ಮ ಗುರಿಯಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

