Wednesday, February 28, 2024

ಇಂದಿರಾ ಕ್ಯಾಂಟೀನ್, ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಕೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೇರಳವಾಗಿವೆ. ಇವತ್ತಿನ ಹಲವು ಖಾಯಿಲೆಗಳಿಗೆ ರಾಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನ ವರದಿಗಳು ಹೇಳಿವೆ.ಆಹಾರ ಸಂಬಂಧಿತ ಆರೋಗ್ಯ ಸಮಸ್ಯೆಗಳಿಗೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರವಾಗಲಿದೆ.

ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!