ಇಂದಿರಾ ಕ್ಯಾಂಟೀನ್‌ ನ ಊಟದ ಹೊಸ ಮೆನು ರೆಡಿ: ಯಾವ ಎಲ್ಲ ತಿಂಡಿ ಸಿಗಲಿದೆ ನೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಾದ್ಯಂತ ಎಲ್ಲ ಇಂದಿರಾ ಕ್ಯಾಂಟೀನ್‌ಗಳ ಊಟದ ಹೊಸ ಮೆನುವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ.

ಇದರಲ್ಲಿ ರಾಗಿಮುದ್ದೆ-ಸೊಪ್ಪಿನ ಸಾರು, ಮಂಗಳೂರು ಬನ್ಸ್ ಸೇರಿ ರಾಜ್ಯದ ಎಲ್ಲ ಪ್ರದೇಶದ ಊಟಕ್ಕೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಆದರೆ, 2017ರಿಂದ ಈವರೆಗೆ ಒಂದೇ ಮಾದರಿಯ ಬೆಲೆಯನ್ನು ನಿಗದಿಪಡಿಸಲಾಗಿದೆ.

ಬೆಂಗಳೂರಿನಲ್ಲಿ 2017ರಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಯಿತು. ಆರಂಭದಿಂದಲೂ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ, ಚಪ್ಪಾತಿ ನೀಡುವುದಕ್ಕೆ ಬೇಡಿಕೆ ಕೇಳಿ ಬರುತ್ತಿತ್ತು. ಇದೀಗ ಇಂದಿರಾ ಕ್ಯಾಂಟೀನ್‌ಗಳಲ್ಲಿ ಊಟ ಮಾಡುವವರಿಗೆ ಮುದ್ದೆ ಭಾಗ್ಯ ನೀಡುವುದಕ್ಕೆ ಸರ್ಕಾರವೇ ಈಗ ಅನುಮತಿ ನೀಡಿದೆ. ಈವರೆಗೆ ಮಧ್ಯಾಹ್ನ ಮತ್ತು ರಾತ್ರಿ ಕೇವಲ ರೈಸ್‌ ಬಾತ್‌ ಅಥವಾ ಅನ್ನ, ಸಾಂಬರ್‌, ಮೊಸರನ್ನ ಮಾತ್ರ ವಿತರಣೆ ಮಾಡಲಾಗುತ್ತಿತ್ತು. ಹಿರಿಯ ನಾಗರಿಕರು, ಸಕ್ಕರೆ ಕಾಯಿಲೆ ಇರುವವರು ಸೇರಿದಂತೆ ಮೊದಲಾದವರು ಕೇವಲ ರೈಸ್‌ ಪದಾರ್ಥದ ಊಟ ಬೇಡ, ಮುದ್ದೆ, ಚಪ್ಪಾತಿ ನೀಡುವಂತೆ ಕೇಳುತ್ತಿದ್ದರು. ಈ ವಿಚಾರ ಸರ್ಕಾರ ಮತ್ತು ಬಿಬಿಎಂಪಿ ಗಮನಕ್ಕೆ ಬಂದಿತ್ತು. ಹಾಗಾಗಿ, ಹೊಸ ವರ್ಷದಿಂದ ಇಂದಿರಾ ಕ್ಯಾಂಟೀನ್‌ ನಲ್ಲಿ ಕಡ್ಡಾಯವಾಗಿ ಮುದ್ದೆ ಪೂರೈಕೆಗೆ ತೀರ್ಮಾನಿಸಲಾಗಿದೆ.

ಇಂದಿರಾ ಕ್ಯಾಂಟೀನ್‌ ಗ್ರಾಹಕರ ಸಂಖ್ಯೆಯಲ್ಲಿ ಗೋಲ್‌ ಮಾಲ್‌ ಮಾಡಲಾಗುತ್ತಿದೆ. ಸುಳ್ಳು ಲೆಕ್ಕ ನೀಡಿ ರಿಯಾಯಿತಿ ಹಣ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ, ಬಿಬಿಎಂಪಿ ಅಧಿಕಾರಿಗಳು ಪ್ರತಿಯೊಂದನ್ನು ಡಿಜಿಟಲಿಕರಣದ ಮೂಲಕ ಪಾರದರ್ಶಕ ವ್ಯವಸ್ಥೆ ಮಾಡಲು ನಿರ್ಧರಿಸಿದ್ದಾರೆ. ನಗರದ ಯಾವುದೇ ಇಂದಿರಾ ಕ್ಯಾಂಟೀನ್‌ಗೆ ಗ್ರಾಹಕ ತೆರಳಿ ಊಟ ಅಥವಾ ಉಪಹಾರದ ಕೋಪನ್ ಪಡೆದರೆ ಆ ಮಾಹಿತಿ ಕೇಂದ್ರ ಕಚೇರಿಗೆ ತಲುಪುವಂತೆ ತಂತ್ರಜ್ಞಾನ ಅಭಿವೃದ್ಧಿ ಪಡಿಸಲಾಗಿದೆ. ಇನ್ನು ಸ್ವಚ್ಛತೆ ಸೇರಿದಂತೆ ಇನ್ನಿತರೆ ಕಾರ್ಯಗಳಿಗೆ ಪ್ರತ್ಯೇಕವಾಗಿ ಆ್ಯಪ್‌ ಅಭಿವೃದ್ಧಿ ಪಡಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!