“ಇಂದಿರಾ ಗಾಂಧಿ ಬಡತನ ನಿರ್ಮೂಲನೆಗೆ ಘೋಷವಾಕ್ಯ ನೀಡಿದರು ಆದರೆ..” ರಾಗಾ ವಿರುದ್ಧ ಅಮಿತ್ ಶಾ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಪ್ರಧಾನಿ ಇಂದಿರಾ ಗಾಂಧಿ, ರಾಹುಲ್ ಗಾಂಧಿ ಅವರ ಅಜ್ಜಿ ‘ಗರೀಬಿ ಹಠಾವೋ’ ಎಂಬ ಘೋಷಣೆಗಳನ್ನು ನೀಡಿದರು ಆದರೆ ವಾಸ್ತವದಲ್ಲಿ ಕಾಂಗ್ರೆಸ್ ಎಂದಿಗೂ ಸಮಾಜದ ಬಡ ವರ್ಗಗಳಿಗೆ ಏನನ್ನೂ ಮಾಡಿಲ್ಲ ಎಂದು ಹೇಳಿದ್ದಾರೆ.

ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರ ನೀಡುವ ಮೂಲಕ ಅದನ್ನ ನನಸು ಮಾಡಿದವರು ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಿದರು.

ಸಂತ ಕಬೀರ್ ನಗರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಅವರು ಬಡವರ ಬಗ್ಗೆ ಮಾತನಾಡುತ್ತಾರೆ, ರಾಹುಲ್ ಬಾಬಾ, ನಿಮ್ಮ ಅಜ್ಜಿ ಬಡತನ ನಿರ್ಮೂಲನೆ ಎಂಬ ಘೋಷಣೆಯನ್ನು ಮಾತ್ರ ನೀಡಿದ್ದರು ಮತ್ತು ನೀವು ಬಡವರಿಗಾಗಿ ಏನನ್ನೂ ಮಾಡಿಲ್ಲ, ಪ್ರಧಾನಿ ಮೋದಿ, ದೇಶದ 80 ಕೋಟಿ ಬಡವರ ಕಲ್ಯಾಣ ಮಾಡಿ 12 ಕೋಟಿ ಮನೆಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ, 4 ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ, 10 ಕೋಟಿ ತಾಯಂದಿರು ಮತ್ತು ಸಹೋದರಿಯರಿಗೆ ಉಜ್ವಲ ಗ್ಯಾಸ್ ಸಿಲಿಂಡರ್ ನೀಡಲಾಗಿದೆ, 14 ಜನರಿಗೆ ಶುದ್ಧ ನೀರು ನೀಡಲಾಗಿದೆ ಎಂದು ಹೇಳಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!