ಬೆಂಗಳೂರಿನಲ್ಲಿ ಇಂಡೋ-ಆಫ್ಘನ್ ಟಿ-20 ಮ್ಯಾಚ್: ನಮ್ಮ ಮೆಟ್ರೋಯಿಂದ ಸಂಚಾರ ಅವಧಿ ವಿಸ್ತರಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ನಡೆಯಲಿರುವ ಇಂಡೋ-ಆಫ್ಘನ್ ಟಿ-20 ಕ್ರಿಕೆಟ್ ಪಂದ್ಯದ ಪ್ರಯುಕ್ತ, ಬೆಂಗಳೂರು ಮೆಟ್ರೋ ರೇಲ್ ಕಾರ್ಪೋರೇಷನ್‌ ಲಿ. (ಬಿಎಂಆರ್‌ಸಿಎಲ್‌) ನೇರಳೆ ಹಾಗೂ ಹಸಿರು ಮಾರ್ಗದಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ರೈಲು ಸೇವೆಗಳನ್ನುಜ.17ರಂದು ರಾತ್ರಿ 11.45 ಗಂಟೆಯವರೆಗೆ ವಿಸ್ತರಿಸಲಿದೆ.

ಪ್ರಯಾಣಿಕರ ಅನೂಕೂಲಕ್ಕಾಗಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ದಿನಾಂಕ 17ನೇ ಜನವರಿ 2024 ಬುಧವಾರ ಮಧ್ಯಾಹ್ನ 2.00 ಗಂಟೆಯಿಂದ ಮಾರಾಟಕ್ಕೆ ಲಭ್ಯವಿರುತ್ತದೆ. ಈ ಕಾಗದದ ಟಿಕೆಟ್‌ಗಳು ರಾತ್ರಿ 8.00 ಗಂಟೆಯಿಂದ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ದಿನದ ವಿಸ್ತ್ರತ ಅವಧಿಯಲ್ಲಿ ಒಂದು ಪ್ರಯಾಣಕ್ಕೆ ಮಾತ್ರ ಸೀಮಿತ ವಾಗಿರುತ್ತದೆ.

ಈ ದಿನದಂದು 50 ರೂ. ಮೊತ್ತದ ಪೇಪರ್ ಟಿಕೆಟ್ ಜೊತೆಗೆ, ಸಾಮಾನ್ಯ ದರದಲ್ಲಿ ಶೇ.5 ರಿಯಾಯಿತಿಯೊಂದಿಗೆ ಕ್ಯೂಆರ್ ಕೋಡ್ ಟಿಕೆಟ್‌ಗಳು, ಪಂದ್ಯದ ದಿನದಂದು ಖರೀದಿಸಿದರೆ ಇಡೀ ದಿನಕ್ಕೆ ಮಾನ್ಯವಾಗಿರುತ್ತದೆ. ಅನೂಕೂಲಕರ ಪ್ರಯಾಣಕ್ಕಾಗಿ ಕ್ರಿಕೆಟ್ ಪಂದ್ಯದ ಆರಂಭಕ್ಕೆ WattsApp/ Namma Metro App/ Pay TMನಲ್ಲಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಸ್ಮಾರ್ಟ್ ಕಾರ್ಡ್‌ಗಳು ಮತ್ತು NCMC ಕಾರ್ಡ್ ಗಳನ್ನು ಸಹ ಎಂದಿನಂತೆ ಬಳಸಬಹುದು.

ವಿಸ್ತ್ರತ ಸಮಯದಲ್ಲಿ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಕ್ಯೂಆರ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಪೇಪರ್ ಟಿಕೆಟ್‌ಗಳನ್ನು ಮಾತ್ರ ಅನುಮತಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಪ್ರಯಾಣಿಕರು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಕೋರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!