ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಬಳಿಕ, ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಧಾನಿ, ಮುಂಬರುವ 5 ವರ್ಷಗಳಲ್ಲಿ ಉಭಯ ದೇಶಗಳ ನಡುವಿನ ವ್ಯಾಪಾರ ದ್ವಿಗುಣಗೊಳ್ಳಲಿದೆ ಎಂದರು.
ಭಾರತ-ಅಮೆರಿಕ ವ್ಯಾಪಾರವನ್ನು ದ್ವಿಗುಣಗೊಳಿಸುವ ಬಗ್ಗೆ ಪ್ರಧಾನಿ ಮಾತನಾಡಿ. 2030 ರ ವೇಳೆಗೆ ನಮ್ಮ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸಿ 500 ಶತಕೋಟಿ ಡಾಲರ್‌ಗೆ ಹೆಚ್ಚಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಹಾಗೂ ಟ್ರಂಪ್ ಭೇಟಿಯ ಸಮಯದಲ್ಲಿ, ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಮತ್ತು ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೂಡ ಉಪಸ್ಥಿತರಿದ್ದರು.