Tuesday, August 16, 2022

Latest Posts

ಭಾರತಕ್ಕೆ 4 ಕ್ರಿಯೋಜೆನಿಕ್ ಆಕ್ಸಿಜನ್ ಕಂಟೇನರ್ ಪೂರೈಕೆ ಮಾಡಿದ ಇಂಡೋನೇಷ್ಯಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತದಲ್ಲಿ ಕೊರೋನಾ ಸೋಂಕು ಹರಡದಂತೆ ತಡೆಯಲು ವಿಶ್ವದ ಅನೇಕ ರಾಷ್ಟ್ರಗಳು ಬೆಂಬಲ ಸೂಚಿಸುತ್ತಿದೆ. ಈ ವೇಳೆ ವೈದ್ಯಕೀಯ ಆಮ್ಲಜನಕ ಕೊರತೆ ನೀಗಿಸಲು ಇಂಡೋನೇಷ್ಯಾ ಭಾರತಕ್ಕೆ ಆಕ್ಸಿಜನ್ ಕಂಟೇನರ್ ಗಳನ್ನು ಕಳುಹಿಸಿದೆ.
ಭಾರತೀಯ ವಾಯುಪಡೆ ಐಎಸ್-76ಎಸ್ ವಿಮಾನವು ತಡರಾತ್ರಿ ಇಂಡೋನೇಷ್ಯಾದ ರಾಜಧಾನಿ ಜಕರ್ತಾದಿಂದ 4 ಕ್ರಿಯೋಜೆನಿಕ್ ಆಕ್ಸಿಜನ್ ಕಂಟೇನರ್ ಗಳನ್ನು ಹೊತ್ತು ಬಂದಿದೆ. ಇದನ್ನು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಇಳಿಸಲಾಗಿದೆ.
ಕೊರೋನಾ ಎರಡನೇ ಅಲೆ ಪ್ರಾರಂಭವಾದಾಗಿನಿಂದ ಭಾರತೀಯ ವಾಯುಪಡೆ ವಿಶ್ವದ ಅನೇಕ ರಾಷ್ಟ್ರಗಳಿಂದ ಆಕ್ಸಿಜನ್, ವೆಂಟಿಲೇಟರ್ ಸೇರಿದಂತೆ ಅನೇಕ ವೈದ್ಯಕೀಯ ಸಾಮಾಗ್ರಿಗಳನ್ನು ತರುವಲ್ಲಿ ಸಕ್ರಿಯವಾಗಿದೆ.
ಐಎಎಸ್ ಸಿ 17 ಈಗಾಗಲೇ ಜರ್ಮನಿಯ ಫ್ರಾಂಕ್ ಪರ್ಟ್, ಅಮೆರಿಕ, ಫ್ರಾನ್ಸ್ ಸೇರಿದಂತೆ ಅನೇಕ ರಾಷ್ಟ್ರಗಳಿಂದ ದೇಶದ ಪ್ರಮುಖ ನಗರಗಳಿಗೆ ಆಕ್ಸಿಜನ್ ರವಾನೆ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss