Friday, July 1, 2022

Latest Posts

ಇಂಡೋನೇಷ್ಯಾದಲ್ಲಿ ಭೀಕರ ರಸ್ತೆ ಅಪಘಾತ: 15ಮಂದಿ ಸಾವು, 16 ಜನರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂಡೋನೇಷ್ಯಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ರಸ್ತೆ ಬದಿಯ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂಡೋನೇಷ್ಯಾದ ಮೊಜೊಕೆರ್ಟೊ ಜಿಲ್ಲೆಯಲ್ಲಿ ಸೋಮವಾರ ಈ ಅವಘಡ ಸಂಭವಿಸಿದೆ. ಚಾಲಕನ ನಿದ್ರಾವಸ್ಥೆಯಿಂದ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಬಯಾ ಪ್ರದೇಶಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಮಧ್ಯ ಜಾವಾದ ಜನಪ್ರಿಯ ಪರ್ವತ ಶ್ರೇಣಿ ಡೀಂಗ್ ಪ್ರಸ್ಥಭೂಮಿಯ ಪ್ರವಾಸ ಮುಗಿಸಿ ಹಿಂತಿರುಗುವಾಗ ಘಟನೆ ನಡೆದಿದೆ.

ರಸ್ತೆ ಅಪಘಾತದಲ್ಲಿ ಹತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿರುವುದಾಗಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ವೈದ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಹಾರ ಕ್ರಮ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ನಾಲ್ಕು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಘಟನಾ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss