ಇಂಡೋನೇಷ್ಯಾ ಭೀಕರ ಭೂಕಂಪ: ಕ್ಷಣಕ್ಷಣಕ್ಕೂ ಹೆಚ್ಚುತ್ತಿವೆ ಸಾವು ನೋವಿನ ಸಂಖ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಸಾವಿನ ಸಂಖ್ಯೆ 162ಕ್ಕೆ ಏರಿಕೆಯಾಗಿದೆ. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇನ್ನೂ ನೂರಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಅವರನ್ನು ರಕ್ಷಿಸಲು ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ಇಂಡೋನೇಷ್ಯಾದ ಜಾವಾ ಮತ್ತು ಸಿಯಾನ್ ಝಾರ್ ನ ರಸ್ತೆಗಳಲ್ಲಿ ಎಲ್ಲಿ ನೋಡಿದರೂ ರಕ್ತಸಿಕ್ತ ಗಾಯಾಳುಗಳೇ ಕಾಣುತ್ತಾರೆ. ಸಂತ್ರಸ್ತರ ರೋದನ ಆ ಪ್ರದೇಶಗಳ ತುಂಬಾ ಮಾರ್ದನಿಯಾಗಿದೆ. ತಮ್ಮವರನ್ನು ಕಳೆದುಕೊಂಡು ರೋದಿಸುತ್ತಿರುವ ಜನರ ಪಾಡು ಹೇಳತೀರದಾಗಿದೆ. ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಬಗೆದಷ್ಟೂ ಶವಗಳು  ದೊರಕುತ್ತಿವೆ. ಸಾವಿನ ಸಂಖ್ಯೆ ಹೆಚ್ಚಾಗಬಹುದೆಂಬ ಆತಂಕವನ್ನು ಅಲ್ಲಿನ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಇನ್ನೂ ಗಂಭೀರ ಗಾಯಗೊಂಡು ಆಸ್ಪತ್ರೆಗಳಲ್ಲಿ ದಾಖಲಾಗಿರುವ ಸಂಖ್ಯೆ ನೂರಾರು. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಹಲವರ ಸ್ಥಿತಿ ಚಿಮತಾಕನವಾಗಿದೆ. ಮಕ್ಕಳು ವೃದ್ಧರೆನ್ನದೆ ಹೆಣಗಳ ರಾಶಿ ಬೀಳುತ್ತಿದೆ. ಭೀಕರ ಭೂಕಂಪಕ್ಕೆ ಇಂಡೋನೇಷ್ಯಾ ತಲ್ಲಣಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!