Friday, June 9, 2023

Latest Posts

ಮೆಟ್ಟಿಲುಬಾವಿ ಕುಸಿತ ಪ್ರಕರಣ: ಸಾವಿನ ಸಂಖ್ಯೆ 35ಕ್ಕೆ ಏರಿಕೆ, ಕಾಣೆಯಾದವರಿಗಾಗಿ ಶೋಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದೋರ್ ದೇವಾಲಯದ ಮೆಟ್ಟಿಲುಬಾವಿ ಕುಸಿತದ ಘಟನೆಯಲ್ಲಿ ಸಾವಿನ ಸಂಖ್ಯೆ 35 ಕ್ಕೆ ಏರಿದೆ ಎಂದು ಇಂದೋರ್ ಪೊಲೀಸ್ ಕಮಿಷನರ್ ಮಕರಂದ್ ದಿಯೋಸ್ಕರ್ ಗುರುವಾರ ತಡರಾತ್ರಿ ತಿಳಿಸಿದ್ದಾರೆ. ದುರಂತದ ನಂತರ ನಾಪತ್ತೆಯಾಗಿರುವ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

“ಸಾವಿನ ಸಂಖ್ಯೆ 35 ಕ್ಕೆ ಏರಿದೆ. ಸೇನಾ ತಂಡವು ಮ್ಹೋವ್‌ನಿಂದ ಆಗಮಿಸಿದ್ದು, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ನೊಂದಿಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ” ಎಂದು ದಿಯೋಸ್ಕರ್ ಸುದ್ದಿಗಾರರಿಗೆ ತಿಳಿಸಿದರು. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಜೊತೆಗೆ 70 ಸೇನಾ ಸಿಬ್ಬಂದಿಯ ತಂಡ ಕಾರ್ಯಾಚರಣೆಯಲ್ಲಿ ತೊಡಗಿದೆ.

“ನೀರು ತೆಗೆಯುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಮುಖ್ಯಮಂತ್ರಿಯವರು ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದಾರೆ. ನಾವು ಸೇನೆಯ ಚಲನವಲನದ ಬಗ್ಗೆಯೂ ಮಾತನಾಡಿದ್ದೇವೆ. ಎಂದು ಇಂದೋರ್ ಜಿಲ್ಲಾಧಿಕಾರಿ ತಿಳಿಸಿದರು.

ರಾಮನವಮಿಯಂದು ಮಧ್ಯಪ್ರದೇಶದ ಇಂದೋರ್‌ನ ಪಟೇಲ್ ನಗರ ಪ್ರದೇಶದ ಬೆಳೇಶ್ವರ ಮಹಾದೇವ್ ಜುಲೇಲಾಲ್ ದೇವಸ್ಥಾನದಲ್ಲಿ ಮೆಟ್ಟಿಲುಬಾವಿಯ ಮೇಲ್ಛಾವಣಿ ಕುಸಿದು ಕನಿಷ್ಠ 14 ಭಕ್ತರು ಸಾವನ್ನಪ್ಪಿದ್ದಾರೆ.  ಪ್ರತ್ಯಕ್ಷದರ್ಶಿಗಳ ಪ್ರಕಾರ, ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ 30 ಕ್ಕೂ ಹೆಚ್ಚು ಭಕ್ತರು ಮೆಟ್ಟಿಲು ಬಾವಿಗೆ ಬಿದ್ದಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಘಟನೆ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಇಂಧೋರ್‌ನಲ್ಲಿ ಸಂಭವಿಸಿದ ದುರ್ಘಟನೆಯಿಂದ ತೀವ್ರ ನೋವಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ರಾಜ್ಯ ಸರ್ಕಾರವು ತ್ವರಿತ ಗತಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ನಡೆಸುತ್ತಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಮೋದಿ ಹಾರೈಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!