ಮಹಾರಾಷ್ಟ್ರ ಚುನಾವಣೆಗೂ ಮುನ್ನ ಹೊಸ ಮತದಾರರ ಸೇರ್ಪಡೆ: ರಾಹುಲ್ ಗಾಂಧಿ ಆರೋಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ನಡುವೆ ಮತದಾರರ ನೋಂದಣಿಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಮಹಾರಾಷ್ಟ್ರದಲ್ಲಿನ ದಿಢೀರ್ ಮತದಾರರ ಹೆಚ್ಚಳವು ಹಿಮಾಚಲ ಪ್ರದೇಶದ ಸಂಪೂರ್ಣ ಮತದಾರರ ಜನಸಂಖ್ಯೆಗೆ ಸಮಾನವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಕಳೆದ 5 ವರ್ಷಗಳಲ್ಲಿ ಸೇರ್ಪಡೆಯಾದ ಮತದಾರರಿಗಿಂತ ಚುನಾವಣೆಗೂ ಹಿಂದಿನ 5 ತಿಂಗಳಲ್ಲಿ ಹೆಚ್ಚಿನ ಮತದಾರರನ್ನು ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಹೊಸ ಮತದಾರರ ನೋಂದಣಿಗಳಲ್ಲಿ ಹೆಚ್ಚಿನವು ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿ ಕೇಂದ್ರೀಕೃತವಾಗಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.

ಈ ಬಗ್ಗೆ ವಿವರವಾದ ವಿಶ್ಲೇಷಣೆಗಾಗಿ ಕಾಂಗ್ರೆಸ್, ಶಿವಸೇನೆ ಮತ್ತು ಎನ್‌ಸಿಪಿಗೆ ಲೋಕಸಭಾ ಚುನಾವಣೆಯ ಎಲೆಕ್ಟ್ರಾನಿಕ್ ಮತದಾರರ ಪಟ್ಟಿಗಳನ್ನು ಒದಗಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದರು.

ಚುನಾವಣಾ ಆಯೋಗ ದಯವಿಟ್ಟು ಲೋಕಸಭೆಯಲ್ಲಿರುವ ಎಲ್ಲಾ ಮತದಾರರ ಮತ್ತು ವಿಧಾನಸಭಾ ಸಭೆಯಲ್ಲಿರುವ ಎಲ್ಲಾ ಮತದಾರರ ಹೆಸರುಗಳು ಮತ್ತು ವಿಳಾಸಗಳು ಮತ್ತು ಮತಗಟ್ಟೆಗಳನ್ನು ನಮಗೆ ನೀಡಬೇಕು. ಇದರಿಂದ ಈ ಹೊಸ ಮತದಾರರು ಯಾರು ಎಂದು ನಾವು ಲೆಕ್ಕ ಹಾಕಬಹುದು. ಕುತೂಹಲಕಾರಿಯಾಗಿ ಹೊಸ ಮತದಾರರು ಹೆಚ್ಚಾಗಿ ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿದ್ದಾರೆ. ನಾನು ಇನ್ನೂ ಯಾವುದೇ ಆರೋಪ ಮಾಡುತ್ತಿಲ್ಲ. ಚುನಾವಣಾ ಆಯೋಗವು ಡೇಟಾವನ್ನು ನೀಡಬೇಕು ಎಂದು ನಾನು ಸದನದಲ್ಲಿ ಹೇಳುತ್ತಿದ್ದೇನೆ ಎಂದು ರಾಹುಲ್ ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!