ಕೈಗಾರಿಕಾ ಭೂಮಿ ಹಂಚಿಕೆ ವ್ಯವಸ್ಥೆ ಇನ್ನು ಸರಳ! ಸಚಿವ ಮುರುಗೇಶ್ ನಿರಾಣಿ ಮಹತ್ವದ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್, ಬೆಂಗಳೂರು
ಕರ್ನಾಟಕ ಕೈಗಾರಿಕಾ ಇಲಾಖೆ ಭೂಮಿ ಹಂಚಿಕೆ ವ್ಯವಸ್ಥೆ ಸರಳೀಕರಣಗೊಳಿಸಿದೆ. ‘ಈಸ್ ಆಫ್ ಡುಯಿಂಗ್ ಬಿಸಿನೆಸ್’ ಮಾದರಿಯಲ್ಲಿ ‘ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್’ ಪದ್ದತಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಹೊಸ ಆದೇಶದ ಮೂಲಕ ಜಾರಿಗೊಳಿಸಿದೆ.
ಭೂ ಪರಿಶೋಧನಾ ಸಮಿತಿಯಲ್ಲಿ (LAC) 10 ಎಕರೆವರೆಗಿನ ಭೂಮಿಹಂಚಿಕೆಗೆ ಪರಿಶೀಲನೆ ಅವಶ್ಯವಿಲ್ಲ ಎಂದು ಹೊಸ ಆದೇಶ ಸ್ಪಷ್ಟಪಡಿಸಿದೆ. ಹೂಡಿಕೆ ಪ್ರಸ್ತಾವನೆಗಳು ಈಗ ನೇರವಾಗಿ ರಾಜ್ಯಮಟ್ಟದ ಸಮಿತಿಯ ಮುಂದೆ ಮಂಡನೆಯಾಗಲಿವೆ.
ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಗಳಿಗೆ ಅಗತ್ಯವಿರುವ ಭೂಮಿಯನ್ನು ಸುಲಭವಾಗಿ ನೀಡುವುದು ಇದರ ಮುಖ್ಯ ಉದ್ದೇಶ. ಸುಲಲಿತ ವ್ಯವಹಾರದಲ್ಲಿದೇಶದಲ್ಲೇ ಮುಂಚೂಣಿ ಸ್ಥಾನದಲ್ಲಿರುವ ರಾಜ್ಯಕ್ಕೆ ಹೆಚ್ಚು ಹೆಚ್ಚುಉದ್ಯಮಗಳನ್ನು ಆಕರ್ಷಿಸಲು ಈ ನಿರ್ಧಾರವನ್ನು ತೆಗೆದುಕೊಂಡಿದೆ.
“10 ಎಕರೆಗಿಂತ ಕಡಿಮೆ ವಿಸ್ತೀರ್ಣದ ಭೂಮಿಗಾಗಿ ಜಮೀನುಪರಿಶೀಲನಾ ಸಮಿತಿಗೆ ಹೋಗುವ ಬದಲು ನೇರವಾಗಿ ಜಿಲ್ಲಾ ಅಥವಾರಾಜ್ಯ ಮಟ್ಟದ ಅನುಮೋದನಾ ಸಮಿತಿಯಲ್ಲಿ ಅನುಮೋದನೆನೀಡುವುದರಿಂದ ಪ್ರಸ್ತಾವನೆಗಳಿಗೆ ತ್ವರಿತವಾಗಿ ಅನುಮೋದನೆದೊರೆಯುತ್ತದೆ. ಇದರಿಂದ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮದಾರರಿಗೆ ಅನುಕೂಲವಾಗುವುದು,”ಎಂದು ಬೃಹತ್‌ ಮತ್ತುಮಧ್ಯಮ ಕೈಗಾರಿಕೆಗಳ ಸಚಿವ ಡಾ. ಮುರುಗೇಶ ಆರ್‌. ನಿರಾಣಿ ಹರ್ಷ ವ್ಯಕ್ತಪಡಿಸಿದ್ದಾರೆ.
ಬರುವ ನವೆಂಬರ್ 2,3 ಮತ್ತು 4 ರಂದು ನಡೆಯಲಿರುವ ಮಹತ್ವಾಕಾಂಕ್ಷೆಯ ಜಾಗತಿಕ ಹೂಡಿಕೆದಾರರ ಸಭೆಗೆ (ಜಿಐಎಂ) ಪೂರ್ವಭಾವಿಯಾಗಿ ಈ ನಿರ್ಧಾರವನ್ನು ಇಲಾಖೆ ಕೈಗೊಂಡಿದೆ.
ಆದಾಗ್ಯೂ, ಹತ್ತು ಎಕರೆಗಿಂತ ಹೆಚ್ಚಿನ ವಿಸ್ತೀರ್ಣ ಮತ್ತು ರೂ.15 ಕೋಟಿಯಿಂದ ರೂ.500 ಕೋಟಿವರೆಗಿನ ಹೂಡಿಕೆಯಪ್ರಸ್ತಾವನೆಗಳನ್ನು ಭೂ ಲೆಕ್ಕ ಪರಿಶೋಧನಾ ಸಮಿತಿಯ ಮುಂದೆಮಂಡಿಸಬಹುದು, ಇಲ್ಲಿ ತೆರವುಗೊಳಿಸಿದ ನಂತರ, ಅಂತಿಮಅನುಮೋದನೆಗಾಗಿ ರಾಜ್ಯ ಮಟ್ಟದ ಏಕ ಗವಾಕ್ಷಿ ತೆರವು ಸಮಿತಿಯಮುಂದೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು.
ಹೊಸ ಆದೇಶ ಏಕೆ?
ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಿಗಳ ಬೆಳವಣಿಗೆಹಿತದೃಷ್ಟಿಯಿಂದ 10 ಎಕರೆವರೆಗೆ ಜಮೀನು ಮಂಜೂರಾತಿ ಕೋರಿಸಲ್ಲಿಸುವ ಬಂಡವಾಳ ಹೂಡಿಕೆ ಪ್ರಸ್ತಾವನೆಗಳನ್ನು ನೇರವಾಗಿ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯ ಮುಂದೆ ಅನುಮೋದನೆಗಾಗಿ ಮಂಡಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಭೂಮಿಪರಿಶೋಧನಾ ಸಮಿತಿಯ (LAC) ಅನುಮೋದನೆಗಾಗಿ ಇನ್ನು ಮುಂದೆತಿಂಗಳುಗಟ್ಟಲೆ ಕಾಯಬೇಕಾಗಿಲ್ಲ.
ರಾಜ್ಯದಲ್ಲಿ 10 ಎಕರೆ ಜಮೀನು ಮಂಜೂರು ಕೋರುವ ಕೈಗಾರಿಕೆಗಳುಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳಾಗಿದ್ದು, ಇವುಗಳನ್ನುತ್ವರಿತಗತಿಯಲ್ಲಿ ಅನುಮೋದನೆ ನೀಡಬೇಕೆಂಬುದು ರಾಜ್ಯದ ಕೈಗಾರಿಕಾಉದ್ದಿಮೆದಾರರ ಸಂಘ ಸಂಸ್ಥೆಗಳ ಬಹುದಿನಗಳ ಬೇಡಿಕೆಯಾಗಿತ್ತು.
ಈವೆರೆಗಿನ ಪ್ರಕ್ರಿಯೆ ಹೇಗಿತ್ತು?
ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ/ ರಾಜ್ಯಮಟ್ಟದ ಏಕಗವಾಕ್ಷಿಅನುಮೋದನಾ ಸಮಿತಿ/ ರಾಜ್ಯ ಉನ್ನತ ಮಟ್ಟದ ಅನುಮೋದನಾಸಮಿತಿ ಸಭೆಗಳ ಮುಂದೆ ಬಂಡವಾಳ ಹೂಡಿಕೆ ಪ್ರಸ್ತಾವನೆಗಳನ್ನುಮಂಡಿಸುವ ಮೊದಲು ಜಮೀನು ಪರಿಶೀಲನಾ ಸಮಿತಿ ಮುಂದೆಪ್ರಸ್ತಾವನೆ ಮಂಡಿಸಬೇಕಿತ್ತು.

ʼಹೂಡಿಕೆದಾರರ ಅಗತ್ಯಗಳನ್ನು ಅರ್ಥಮಾಡಿಕೊಂಡು ಭೂಮಂಜೂರಾತಿ ಪ್ರಕ್ರಿಯೆಯಲ್ಲಿ ತಿದ್ದುಪಡಿ ಮಾಡಲು ಅವಕಾಶಮಾಡಿಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರಿಗೆ ಧನ್ಯವಾದ. ಏಕಗವಾಕ್ಷಿ ಅನುಮೋದನಾ ವ್ಯವಸ್ಥೆಯನ್ನುಸರಳೀಕರಣಗೊಳಿಸುವ ಮೂಲಕ ಸುಲಲಿತಕ್ಕೆ ವ್ಯವಹಾರ ಹಾಗೂಪಾರದರ್ಶಕತೆಗೆ ಒತ್ತು ನೀಡಿ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ತ್ವರಿತವಾಗಿ ಅನುಮೋದನೆಪಡೆಯಲು ಸಾಧ್ಯವಾಗಲಿದೆʼ.

 .ಡಾ.ಮುರುಗೇಶ ಆರ್‌. ನಿರಾಣಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಸಚಿವರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!