ಕಾರಿಗೆ ಪೊಲೀಸ್‌ ವಾಹನ ಡಿಕ್ಕಿ: 6ತಿಂಗಳ ಮಗು ಸಾವು, ಐವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುರುಗ್ರಾಮ್‌ನಲ್ಲಿ ಭಾನುವಾರ ಬೆಳಗ್ಗೆ ರಾಂಗ್ ಸೈಡ್‌ನಲ್ಲಿ ಚಲಿಸುತ್ತಿದ್ದ ಪೊಲೀಸ್ ವ್ಯಾನ್‌ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ತಿಂಗಳ  ಮಗು ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪೊಲೀಸರ ಪ್ರಕಾರ, ಗ್ವಾಲ್ ಪಹಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಂಗ್ ಸೈಡ್‌ನಲ್ಲಿ ವೇಗವಾಗಿ ಬಂದ ತುರ್ತು ಪ್ರತಿಕ್ರಿಯೆ ವಾಹನವು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಆರು ತಿಂಗಳ ಹೆಣ್ಣು ಮಗುವನ್ನು ಬಲಿ ತೆಗೆದುಕೊಂಡು ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಕಾರು ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮೂಲಗಳ ಪ್ರಕಾರ, ಅಪಘಾತದಲ್ಲಿ ಭಾಗಿಯಾದ ಪೊಲೀಸರು ಸ್ಥಳದಿಂದ ಪರಾರಿಯಾಗಿದ್ದಾರೆ.

ಅಪಘಾತದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪಿಸಿಆರ್ ವ್ಯಾನ್ ಚಾಲಕ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಗುರುಗ್ರಾಮ್‌ನ ಸಹಾಯಕ ಪೊಲೀಸ್ ಆಯುಕ್ತ ವಿಕಾಸ್ ಕೌಶಿಕ್ ತಿಳಿಸಿದ್ದಾರೆ. ಅಪಘಾತದ ಸ್ಥಳದಿಂದ ಪರಾರಿಯಾಗುವ ಬದಲು ಪೊಲೀಸ್ ಅಧಿಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರೆ ಇಂದು ನನ್ನ ಮಗಳು ಬದುಕಿರುತ್ತಿದ್ದಳು ಎಂದು ಮಗುವಿನ ತಂದೆ ಆಕ್ರೋಶ ಹೊರಹಾಕಿದ್ದಾರೆ.

ಪೊಲೀಸರು ಅಪಘಾತ ಸ್ಥಳದಿಂದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಐಪಿಸಿ ಸೆಕ್ಷನ್ 279, 337, 427, 304 ಎ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!