ಕಾಸರಗೋಡು ಜಿಲ್ಲೆಯಲ್ಲಿ 500ರ ಗಡಿ ದಾಟಿದ ಸೋಂಕು: ಸೋಮವಾರ 574 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಕೊರೋನಾ ಸೋಂಕು ತಗುಲಿದವರ ಸಂಖ್ಯೆ ಸೋಮವಾರ 500ರ ಗಡಿ ದಾಟಿದೆ. ಅದರಂತೆ 574 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 522 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 98 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 22,946 ಹೊಸ ಪ್ರಕರಣ
ಕೇರಳ ವ್ಯಾಪಕವಾಗಿಯೂ ಸೋಂಕು ಹರಡುತ್ತಿದ್ದು , ಸೋಮವಾರ ಹೊಸದಾಗಿ 22,946 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 22,179 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 5280 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 18 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಮವಾರ ಶೇಕಡಾ 33.07 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ. ಭಾನುವಾರ ಶೇಕಡಾ 30.55 ಟಿಪಿಆರ್ ದಾಖಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!