September 30, 2026
Wednesday, September 30, 2026
spot_img

ಜಮ್ಮುವಿನ ಎಲ್‌ಒಸಿ ಬಳಿ ಒಳನುಸುಳುವಿಕೆ ಯತ್ನ: ಓರ್ವ ಉಗ್ರನ ಎನ್‌ಕೌಂಟರ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ನೌಶೇರಾದ ಝಂಗಾರ್ ಪ್ರದೇಶದ ಗಡಿ ನಿಯಂತ್ರಣ ರೇಖೆಯ ಬಳಿ ಇಬ್ಬರು ಭಯೋತ್ಪಾದಕರು ಒಳನುಸುಳುವಿಕೆ ಯತ್ನಸಿದ್ದು, ಈ ವೇಳೆ ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ.

ಭದ್ರತಾ ಪಡೆಗಳು ಖಚಿತ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿ, ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದೆ.

ಎರಡನೇ ಭಯೋತ್ಪಾದಕನನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸೇನೆ ತಿಳಿಸಿದೆ.

Must Read