January18, 2026
Sunday, January 18, 2026
spot_img

ಕುಪ್ವಾರಾದಲ್ಲಿ ಒಳ ನುಸುಳಲು ಯತ್ನ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನಾ ಪಡೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಒಳ ನುಸುಳಲು ಯತ್ನಿಸಿದ ಭಯೋತ್ಪಾದಕರ ಪ್ರಯತ್ನವನ್ನು ತಡೆದ ಭದ್ರತಾ ಪಡೆ ಅವರನ್ನು ಹೊಡೆದುರುಳಿಸಿದೆ.

ಆರಂಭದಲ್ಲಿ ಅಡಗು ತಾಣದಲ್ಲಿದ್ದ ಉಗ್ರರು ಆಕ್ರಮಣ ನಡೆಸಿದರು. ಪ್ರತಿದಾಳಿ ನಡೆಸಿದ ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಭಯೋತ್ಪಾದಕರು ಬಲಿಯಾದರು. ಅದಾಗ್ಯೂ ಅವರ ಶವವನ್ನು ಇನ್ನು ವಶಕ್ಕೆ ಪಡೆದುಕೊಂಡಿಲ್ಲ. ಸ್ಥಳಕ್ಕೆ ಭಯೋತ್ಪಾದನೆ ನಿಗ್ರಹ ದಳ ಧಾವಿಸಿದ್ದು, ಕಾರ್ಯಾಚರಣೆ ಮುಂದುವರಿದಿದೆ.

Must Read

error: Content is protected !!