ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿನ ಮಳೆಯ ಅಬ್ಬರ ಹಾಗೂ ಮಹಾರಾಷ್ಟ್ರ ಜಲಾಶಯಗಳಿಂದ ಬರುತ್ತಿರುವ ಭಾರೀ ಪ್ರಮಾಣದ ನೀರಿನಿಂದ ಕೃಷ್ಣಾ ನದಿ ನೀರಿನ ಒಳ ಹರಿವಿನಲ್ಲಿ ಏರಿಕೆಯಾಗಿದೆ.
ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಒಟ್ಟು 2 ಲಕ್ಷದ 52 ಸಾವಿರ ಕ್ಯೂಸೆಕ್ ನೀರಿನ ಒಳ ಹರಿವು ದಾಖಲಾಗಿದೆ. ಅಪಾಯದ ಮಟ್ಟ ಮೀರಿ ಕೃಷ್ಣಾ ನದಿ ಹರಿಯುತ್ತಿದ್ದು ಒಟ್ಟು 12 ಪ್ರಮುಖ ಸೇತುವೆಗಳ ಮುಳುಗಡೆ ಯಥಾಸ್ಥಿತಿ ಮುಂದುವರೆದಿದೆ.
ನೀರು ಹೆಚ್ಚಳವಾದಲ್ಲಿ ಗ್ರಾಮಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಇನ್ನು 50 ಸಾವಿರ ಕ್ಯೂಸೆಕ್ ನೀರು ಹೆಚ್ಚಾದಲ್ಲಿ ಪ್ರವಾಹ ಸೃಷ್ಟಿ ಆಗುವ ಆತಂಕದಲ್ಲಿ ನದಿ ತೀರದ ಜನರಿದ್ದಾರೆ.