ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಮಳೆಯಬ್ಬರ ಜೋರಾಗಿರುವ ಹಿನ್ನೆಲೆ ಕೃಷ್ಣಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿರುವ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, 2,45,000 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಜಲಾಶಯದ ಸುರಕ್ಷತಾ ದೃಷ್ಟಿಯಿಂದ 26 ಗೇಟ್‌ಗಳ ಮೂಲಕ ನಾರಾಯಣಪುರ ಜಲಾಶಯಕ್ಕೆ 2,50,000 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಭಾರೀ ಪ್ರಮಾಣದಲ್ಲಿ ಕೃಷ್ಣಾ ನದಿಗೆ ನೀರನ್ನ ಹರಿಬಿಡಲಾಗುತ್ತಿದ್ದು, ರಾಯಚೂರಿನ ದೇವದುರ್ಗದ ಐತಿಹಾಸಿಕ ಕೊಪ್ಪರ ಲಕ್ಷ್ಮೀ ನರಸಿಂಹ ದೇವಾಲಯ ಸಂಪೂರ್ಣ ಜಲಾವೃತವಾಗಿದೆ.