ಪ್ರಭಾವಿ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನರಾಗಿದ್ದಾರೆ. ಬೆಳ್ತಂಗಡಿಯಿಂದ ಐದು ಬಾರಿ ಶಾಸಕರಾಗಿದ್ದ 79 ವರ್ಷದ ಕೆ.ವಸಂತ ಬಂಗೇರ ಅವರು ಇಂದು ಮೇ 8 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

1946ರ ಜನವರಿ 15ರಂದು ಬೆಳ್ತಂಗಡಿಯಲ್ಲಿ ಜನಿಸಿದ್ದ ಕೆ.ವಸಂತ ಬಂಗೇರ, ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ನಾಳೆ (ಮೇ 09) ಬೆಳಗ್ಗೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ಸಾಧ್ಯತೆ ಇದ್ದು, ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇರಲಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!