ಮೆಡಿಕಲ್ ಕಾಲೇಜು ಕುರಿತ ಮಾಹಿತಿ ಸತ್ಯಕ್ಕೆ ದೂರ: ಮಾಜಿ ಶಾಸಕ ತಿಪ್ಪಾರೆಡ್ಡಿ

ಹೊಸದಿಗಂತ ವರದಿ,ಚಿತ್ರದುರ್ಗ :

ಮೆಡಿಕಲ್ ಕಾಲೇಜು ಬಗ್ಗೆ ಮುಖ್ಯಮಂತ್ರಿಗಳು ನೀಡಿರುವ ಮಾಹಿತಿ ಸತ್ಯಕ್ಕೆ ದೂರವಾದ ಮಾತಾಗಿದೆ. ಇದೇ ರೀತಿ ರಾಜ್ಯ ಸರ್ಕಾರ ಅಪ್ಪರ್ ಭದ್ರಾ ಯೋಜನೆಗೆ ರಾಜ್ಯ ಸರ್ಕಾರ ಹಣವನ್ನು ನೀಡದಿರುವ ಬಗ್ಗೆ ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ವಿಷಾದ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆ.೧೬ ರಂದು ಮಂಡಿಸಿದ ೨೦೨೪-೨೫ನೇ ಸಾಲಿನ ಅಯವ್ಯಯದಲ್ಲಿ ಅನೇಕ ಇಲಾಖೆಗಳ ಬಗ್ಗೆ ಮಾಹಿತಿ ನೀಡಿದರು. ಈ ಆಯವ್ಯಯದಲ್ಲಿ ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ೧೫೦ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಇದರ ಅಭಿವೃದ್ದಿಗಾಗಿ ಗಮನ ನೀಡಲಾಗುವುದೆಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ನಾಯಕರು ಮೆಡಿಕಲ್ ಕಾಲೇಜಿಗೆ ೫೦೦ ಕೋಟಿ ಇಡಲಾಗಿದೆ ಎಂದು ತಿಳಿಸಿದ್ದಾರೆ. ಆದರೆ ಇದು ಹಿಂದಿನ ವರ್ಷವೇ ಆಯವ್ಯಯದಲ್ಲಿ ಹಣ ಮಂಜೂರಾಗಿತ್ತು ಎಂದರು.

ಜನವರಿ ಅಥವಾ ಫೆಬ್ರವರಿಯಲ್ಲಿ ಟೆಂಡರ್ ಫೈನಲ್ ಆಗಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಟೆಂಡರ್ ಕರೆದು ಅಂದಿನ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿಯವರು ಗ್ರೀನ್ ಸಿಗ್ನಲ್ ನೀಡಿ, ಕಟ್ಟಡದ ಕಾಮಗಾರಿ ಪ್ರಾರಂಭ ಮಾಡಲು ಸೂಚಿಸಿದ್ದರು. ಅದರಂತೆ ಕಟ್ಟಡದ ಕಾಮಗಾರಿಯೂ ಪ್ರಾರಂಭ ಮಾಡಲಾಗಿತ್ತು. ಕಳೆದ ವರ್ಷದ ಲೆಕ್ಕದಲ್ಲಿ ೧೫೦ ವಿದ್ಯಾರ್ಥಿಗಳು ಕಾಲೇಜಿಗೆ ಸೇರಿದ್ದಾರೆ. ಇನ್ನೂ ಕೆಲವೇ ದಿನಗಳಲ್ಲಿ ಮೊದಲನೇ ವರ್ಷದ ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಹೇಳಿದರು.

ಈ ವರ್ಷ ಮುಖ್ಯಮಂತ್ರಿಗಳು ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ೫೦೦ ಕೋಟಿ ರೂ.ಗಳನ್ನು ನೀಡಿದ್ದಾರೆ ಎಂಬುದನ್ನು ಕೆಲವು ಕಾಂಗ್ರೆಸ್ ನಾಯಕರು ಮಾಧ್ಯಮಗಳ ಮೂಲಕ ಹೇಳಿರುವುದು ತಪ್ಪು. ಕಳೆದ ಬಿಜೆಪಿ ಸರ್ಕಾರದಲ್ಲಿಯೇ ಎಲ್ಲಾ ರೀತಿಯ ವ್ಯವಸ್ಥೆಯಾಗಿತ್ತು. ಕೇಂದ್ರ ಸರ್ಕಾರದ ಎಂಸಿಐಯ ಅನುಮತಿಯೂ ದೂರಕಿದ್ದು, ಹಾಸ್ಟಲ್ ಸಮಸ್ಯೆಯನ್ನು ಸಹ ನಿವಾರಣೆ ಮಾಡಲಾಗಿತ್ತು. ಭೋಧಕರ ಕೊಠಡಿ, ಹಾಸ್ಟಲ್ ಸೇರಿದಂತೆ ಇತರೆ ಕಟ್ಟಡಗಳನ್ನು ತೋರಿಸಿದ ನಂತರವೇ ಕೇಂದ್ರ ಸರ್ಕಾರವು ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಅಪ್ಪರ್ ಭದ್ರಾಕ್ಕಾಗಿ ೫೩೦೦ ಕೋಟಿ ನೀಡುವುದಾಗಿ ತಿಳಿಸಿತ್ತು. ಇದರ ಬಗ್ಗೆ ನಮ್ಮ ಗಮನ ಇದೆ. ರಾಜ್ಯ ಸರ್ಕಾರ ಇದಕ್ಕೆ ಪ್ರತ್ಯೇಕ ಅಕೌಂಟ್ ಆರಂಭಿಸಿ ಹಣ ಪಡೆಯಬಹುದಾಗಿದೆ. ಆದರೆ ರಾಜ್ಯ ಸರ್ಕಾರ ಇದರ ಬಗ್ಗೆ ಸರಿಯಾದ ಮಾಹಿತಿ ನೀಡದೆ ಜನರಲ್ಲಿ ಗೊಂದಲ ಮೂಡಿಸುತ್ತಿದೆ. ಹಣ ಇರುತ್ತದೆ ಅದು ಎಲ್ಲೂ ಹೋಗುವುದಿಲ್ಲ. ಇದರ ಬಗ್ಗೆ ಹೋರಾಟ ಮಾಡುತ್ತಿರುವುದು ಸಂತಸದ ಸಂಗತಿ. ಇದರಲ್ಲಿ ತಪ್ಪೇನ್ನಿಲ್ಲ ಇದರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರುವುದು ಅಗತ್ಯ. ಅಪ್ಪರ್ ಭದ್ರಾ ಬಂದರೆ ಒಂದು ಪಕ್ಷಕ್ಕೆ ಅಲ್ಲ ಚಿತ್ರದುರ್ಗ ಜಿಲ್ಲೆ ಪೂರ್ಣವಾಗಿ ನೀರಾವರಿಯಾಗಲಿದೆ. ನಾವು ಅದರ ಪರವಾಗಿ ಇದ್ದೇವೆ ಎಂದರು.

ಈ ಸಾಲಿನ ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಮುಖ್ಯಮಂತ್ರಿಗಳು ಅಪ್ಪರ್ ಭದ್ರಾ ಯೋಜನೆಗೆ ಕನಿಷ್ಠ ಪ್ರಮಾಣದ ಹಣ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಒಂದು ರೂಪಾಯಿಯನ್ನೂ ಸಹ ನೀಡಿಲ್ಲ. ಇದರಿಂದ ಭ್ರಮನಿರಸನವಾಗಿದೆ. ಕೇಂದ್ರ ಸರ್ಕಾರ ೫೩೦೦ ಕೋಟಿ ರೂ.ಗಳನ್ನು ನೀಡಲು ಬದ್ದವಾಗಿದೆ. ಇದರ ಬಗ್ಗೆ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಸರಿಯಾದ ಮಾಹಿತಿ ನೀಡಬೇಕಿದೆ. ೧೦೦ ವರ್ಷದಲ್ಲಿ ೭೫ ವರ್ಷ ಬರಗಾಲ ಅನುಭವಿಸಿದ್ದೇವೆ. ಅಪ್ಪರ್ ಭದ್ರಾ ಅತಿ ಮುಖ್ಯವಾದ ಯೋಜನೆಯಾಗಿದೆ. ಈ ಹೋರಾಟಕ್ಕೆ ಸಮಿತಿ ಇದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!