ಬಿಜೆಪಿ ದೂರಿನ ಬೆನ್ನಲ್ಲೇ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ‌ನಿಂಬಾಳ್ಕರ್ ವರ್ಗಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ (Hemant Nimbalkar) ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅವರ ಸ್ಥಾನಕ್ಕೆ 2012ರ ಐಎಎಸ್‌ ಬ್ಯಾಚ್‌ನ ಸುರಳ್ಕರ್ ವಿಕಾಸ್ ಕಿಶೋರ್ (Suralkar Vikas Kishor) ಅವರನ್ನು ನೇಮಿಸಲಾಗಿದೆ.

ಬಿಜೆಪಿ ದೂರು ನೀಡಿದ ಬೆನ್ನಲ್ಲೇ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿರುವುದು ಕಂಡುಬಂದಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಮಿಷನರ್ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲು ಕೋರಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿತ್ತು. ತಮ್ಮ ಕಚೇರಿಯನ್ನು ಬಳಸಿಕೊಂಡು ಪತ್ನಿ, ಉತ್ತರ ಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ (Anjali Nimbalkar) ಪರವಾಗಿ ಮತ ನೀಡಲು ಕೇಳುತ್ತಿರುವುದಾಗಿ ಮಾಹಿತಿ ಸಿಕ್ಕಿದೆ. ಆದ್ದರಿಂದ ತಕ್ಷಣ ಅವರನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿತ್ತು. ರಾಜ್ಯದ ಒಳಗಡೆ ಇದ್ದರೆ ಮತ್ತೆ ಪ್ರಭಾವ ಬಳಸುವ ಸಾಧ್ಯತೆ ಇದ್ದು, ಅವರಿಗೆ ಕರ್ನಾಟಕದಿಂದ ಹೊರಗಡೆ ಕೆಲಸ ಮಾಡಲು ಅವಕಾಶ ಕೊಡಿ ಎಂದು ಬಿಜೆಪಿ ನಾಯಕರು ತಿಳಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!