ತಿರುಪತಿಗೆ ತೆರಳುವ ಭಕ್ತರಿಗೆ ಮಾಹಿತಿ: ಈ ಎರಡು ದಿನವಿಲ್ಲ ತಿಮ್ಮಪ್ಪ ದರುಶನ ಭಾಗ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರು ಸೂರ್ಯ ಹಾಗೂ ಚಂದ್ರ ಗ್ರಹಣ ವಾದ ಅಕ್ಟೋಬರ್ 25 ಮತ್ತು ನವೆಂಬರ್ 8ರಂದು ಹೋಗದಂತೆ ಸೂಚಿಸಲಾಗಿದ್ದು, ಆ ದಿನ ತಿರುಪತಿ ತಿಮ್ಮಪ್ಪನ ದರ್ಶನ ಭಾಗ್ಯ ಇರುವುದಿಲ್ಲ .
ಅಕ್ಟೋಬರ್ 25 ರಂದು ಸೂರ್ಯಗ್ರಹಣ ಇರುವುದರಿಂದ ಹಾಗೂ ನವೆಂಬರ್ 8ರಂದು ಚಂದ್ರ ಗ್ರಹಣ ಇರುವುದರಿಂದ ತಿರುಮಲದ ವೆಂಕಟೇಶ್ವರ ದೇವಸ್ಥಾನವನ್ನು ಸುಮಾರು 12 ಗಂಟೆಗಳ ಕಾಲ ಮುಚ್ಚಲಾಗುತ್ತದೆ ಎಂದು ದೇವಾಲಯದ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಅಷ್ಟೇ ಅಲ್ಲದೇ ತಿರುಮಲ ತಿರುಪತಿ ದೇವಸ್ಥಾನಗಳ ಆಡಳಿತದಲ್ಲಿರುವ ಸುಮಾರು 60 ಇತರ ದೇವಾಲಯಗಳು ಈ ಸಮಯಬಂದ್​ ಮಾಡಲಾಗುತ್ತದೆ. ಅನ್ನದಾನ ಸಂಕೀರ್ಣದಲ್ಲಿ ಯಾವುದೇ ಆಹಾರ ನೀಡಲಾಗುವುದಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ.
ಸೂರ್ಯಗ್ರಹಣವು ಅಕ್ಟೋಬರ್ 25ರ ಸಂಜೆ 5.11ರಿಂದ ಪ್ರಾರಂಭವಾಗಿ 6.27 ಸಂಜೆ ವರೆಗೆ ಇರುತ್ತದೆ. ನವೆಂಬರ್ 8ರಂದು ಚಂದ್ರಗ್ರಹಣವು ಮಧ್ಯಾಹ್ನ 2.39ಕ್ಕೆ ಪ್ರಾರಂಭವಾಗಿ ಅಂದು ಸಂಜೆ 6.19ಕ್ಕೆ ಕೊನೆಗೊಳ್ಳುತ್ತದೆ ಎಂದು ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!