ಮೈಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಸಮಸ್ಯೆ, ರೋಗಿಗಳ ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಗ್ರಾಮೀಣ ಮತ್ತು ದೂರದ ಊರುಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ತಮ್ಮ ಪ್ರಯತ್ನಗಳ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಮ್ಮೆಪಡುತ್ತವೆಯಾದರೂ, ಇಲ್ಲಿನ ವಾಸ್ತವತೆಯು ವಿಭಿನ್ನವಾಗಿದೆ.

ಬಡವರಿಗೆ ವೈದ್ಯಕೀಯ ಸೇವೆ ಒದಗಿಸಲು ನಾವು ಬದ್ಧರಾಗಿದ್ದೇವೆ. ಆರೋಗ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದ ರಾಜಕಾರಣಿಗಳು ಒಮ್ಮೆ ಹೆಚ್.ಡಿ.ಕೋಟೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ.

ಹೆಚ್.ಡಿ.ಕೋಟೆ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಿರಂತರ ವಿದ್ಯುತ್, ನೀರಿನ ಕೊರತೆಯಿಂದ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನೀರಿಲ್ಲದೆ ಜನರು ಪರದಾಡುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡುವ ಸೌಲಭ್ಯ ಇಲ್ಲದ ಕಾರಣ ಕಳೆದ ಎರಡು ದಿನಗಳಿಂದ ಕನಿಷ್ಠ 5ರಿಂದ 10 ಡಯಾಲಿಸಿಸ್ ರೋಗಿಗಳು ಆಸ್ಪತ್ರೆ ಸಿಬ್ಬಂದಿಯಿಂದ ಚಿಕಿತ್ಸೆ ಪಡೆದಿಲ್ಲ. ತೀವ್ರ ಮೂತ್ರಪಿಂಡ ಸಮಸ್ಯೆ ಇರುವವರಿಗೆ ಡಯಾಲಿಸಿಸ್ ಅಗತ್ಯ. ಆದರೆ ಆಸ್ಪತ್ರೆಯಲ್ಲಿ ವಿದ್ಯುತ್, ನೀರಿನ ಸಮಸ್ಯೆಯಿಂದ ರೋಗಿಗಳಿಗೆ ಚಿಕಿತ್ಸೆ ನೀಡುವುದೂ ದುಸ್ತರವಾಗಿದೆ.

ಈ ಆಸ್ಪತ್ರೆಯ ಪ್ರಮುಖ ನೀರು ಮತ್ತು ವಿದ್ಯುತ್ ಮೂಲಗಳಿಲ್ಲದೆ, ಅನೇಕ ರೋಗಿಗಳ ಜೀವವು ಅಪಾಯದಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!