ಇಂಜೆಕ್ಷನ್ ಸೈಡ್ ಎಫೆಕ್ಟ್: ಹಾವೇರಿಯಲ್ಲಿ ಯುವತಿ ಸಾವು

ಹೊಸದಿಗಂತ ವರದಿ, ಹಾವೇರಿ :

ಕೈ ಮೇಲೆ ಗುಳ್ಳೆ ಎದ್ದಿದೆ ಆಸ್ಪತ್ರೆಗೆ ಬಂದ ಯುವತಿಗೆ ವೈದ್ಯರು ನೀಡಿದ ಚುಚ್ಚುಮದ್ದಿನ ಅಡ್ಡ ಪರಿಣಾಮದಿಂದಾಗಿ ಬಾಲಕಿ ಸಾವನ್ನಪ್ಪಿ, ಆಸ್ಪತ್ರೆಯ ಮುಂಬಾಗದಲ್ಲಿ ಪೋಷಕರು ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಹೆಡ್ಡಿಗೊಂಡ ಗ್ರಾಮದ ವಂದನಾ ಶಿವಪ್ಪ ತುಪ್ಪದ (17) ಮೃತ ಯುವತಿ.

ಕೈ ಮೇಲೆ ಗುಳ್ಳೆ ಎದ್ದಿದೆ ಎಂದು ನಗರದ ಖಾಸಗಿ ಆಸ್ಪತ್ರೆಗೆ ಯುವತಿಯನ್ನು ಕುಟುಂಬಸ್ಥರು ಕರೆತಂದಿದ್ದರು. ಅದಕ್ಕೆ ಸಣ್ಣ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಹೇಳಿದ್ದ ವೈದ್ಯರು, ಸಲಾಯಿನ್ ಹಚ್ಚಿ ಅದರಲ್ಲೇ ಇಂಜೆಕ್ಷನ್ ನೀಡಿದ್ದರು. ಇಂಜೆಕ್ಷನ್ ಬಳಿಕ ರಿಯಾಕ್ಷನ್ ಆಗಿ ಮೈ ಕೆರೆತ, ಬಾಯಲ್ಲಿ ನೊರೆ ಬಂದು ಕ್ಷಣಾರ್ಧದಲ್ಲೇ ಯುವತಿ ಸಾವನ್ನಪ್ಪಿದ್ದಾಳೆ.

ಯುವತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ. ಬಾಲಕಿ ವಂದನಾ ಸಾವಿನ ಬಳಿಕ ಆಸ್ಪತ್ರೆ ವೈದ್ಯರೇ ನಾಪತ್ತೆಯಾಗಿದ್ದಾರೆ.

ಬೆಳಿಗ್ಗೆಯಿಂದ ಆರೋಗ್ಯವಾಗಿ ಲವಲವಿಕೆಯಿಂದ ಇದ್ದ ಬಾಲಕಿ ವಂದನಾ ಕೈಯ ಮಣಿಕಟ್ಟಿನ ಭಾಗದಲ್ಲಿ ಸಣ್ಣ ಗುಳ್ಳೆ ಎದ್ದಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದಳು. ವೈದ್ಯರು ಚುಚ್ಚುಮದ್ದು ನೀಡುತ್ತಿದ್ದಂತೆ ಕೆಲವೇ ಹೊತ್ತಿನಲ್ಲಿ ಯುವತಿ ಸಾವು.

ಘಟನೆ ಕುರಿತು ಮಾಹಿತಿ ಸಿಗುತ್ತಿದ್ದಂತೆಯೇ ತಾಲೂಕು ವೈದ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಆಸ್ಪತ್ರೆಗೆ ದೌಡಾಯಿಸಿದರು. ಈ ವೇಳೆ ಮಾದ್ಯಮಗಳ ಜತೆ ಮಾತನಾಡಿ, ಈ ಕುರಿತು ಸಮಗ್ರ ಮಾಹಿತಿ ಪಡೆದಿದ್ದು, ಆಸ್ಪತ್ರೆಯನ್ನು ಸದ್ಯಕ್ಕೆ ಸೀಜ್ ಮಾಡಲಾಗುತ್ತದೆ. ನಂತರ ಸಮಗ್ರ ವರದಿ ನಂತರ ಹಿರಿಯ ಅಧಿಕಾರಿಗಳಿಗೆ ಮುಂದಿನ ಕ್ರಮಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಬಾಲಕಿ ಸಾವನ್ನಪ್ಪಿದ ಬೆನ್ನಲ್ಲೇ ಆಸ್ಪತ್ರೆಯ ಮುಂಬಾಗದಲ್ಲಿ ಪೋಷಕರು ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಹೆಚ್ಚುವರಿ ಪೊಲೀಸ್ ನಿರೀಕ್ಷಕ ಎಲ್.ಎಸ್. ಶಿರಕೋಳ ಬೇಟಿ ನೀಡಿದ್ದರು. ನಗರ ಸಿಪಿಐ ಮೋಲಿಲಾಲ್ ಪವಾರ ಹಾಗೂ ಸಿಬ್ಬಂದಿ ಘಟನಾ ಸ್ಥಳದಲ್ಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!