Wednesday, October 5, 2022

Latest Posts

ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಮಿದುಳು ನಿಷ್ಕ್ರಿಯ: ಅಂಗಾಂಗ ದಾನಕ್ಕೆ ಮುಂದಾದ ಪೋಷಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಲಿಸುತ್ತಿದ್ದ ಬಸ್ನಿಂದ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯ ಮಿದುಳು ನಿಷ್ಕ್ರಿಯಗೊಂಡಿದ್ದು, ಇದೀಗ ವಿದ್ಯಾರ್ಥಿಯ ಅಂಗಾಂಗ ದಾನಕ್ಕೆ ಹೆತ್ತವರು ಮುಂದಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ತ್ಯಾಗರಾಜ್ ಮತ್ತು ಮಮತಾ ಕರ್ಕೇರ ದಂಪತಿ ಪುತ್ರ ಯಶರಾಜ್ (16) ನಗರದ ಸೆಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯಾಗಿದ್ದರು.
ಕಳೆದ ವಾರ ಸೆ.7ರಂದು ಯಶರಾಜ್ ಉಳ್ಳಾಲದಿಂದ ಸಿಟಿ ಬಸ್ನಲ್ಲಿ ಕಾಲೇಜಿಗೆ ಪ್ರಯಾಣಿಸುತ್ತಿದ್ದಾಗ ರಾ.ಹೆ.66ರ ಅಡಂ ಕುದ್ರುವಿನಲ್ಲಿ ಚಲಿಸುತ್ತಿದ್ದ ಬಸ್ನಿಂದ ಕೆಳಗೆ ಬಿದ್ದು ತಲೆಗೆ ಗಂಭೀರವಾದ ಗಾಯವಾಗಿತ್ತು.ಬಳಿಕ ಗಾಯಾಳು ಯಶರಾಜ್ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಕಳೆದ ಒಂದು ವಾರದಿಂದ ಚಿಕಿತ್ಸೆ ನೀಡಲಾಗಿತ್ತು. ಆದರೇ, ಇಂದು ವಿದ್ಯಾರ್ಥಿಯ ಮಿದುಳು ನಿಷ್ಕ್ರಿಯಗೊಂಡಿದೆ. ಆದರೆ ಪೋಷಕರು ಶೋಕದ ನಡುವೆಯೂ ಯಶರಾಜ್ ಅಂಗಾಂಗದಾನಕ್ಕೆ ಮುಂದಾಗಿದ್ದು, ಯಶರಾಜ್ ಸಾವಿನಲ್ಲೂ ವಿದ್ಯಾರ್ಥಿ ಸಾರ್ಥಕತೆ ಮೆರೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!