ಹೊಸದಿಗಂತ ವರದಿ, ಹುಬ್ಬಳ್ಳಿ:
ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಅನ್ಯಾಯವಾಗಿಲ್ಲ. ಆದರೆ ರಾಜ್ಯ ಸರ್ಕಾರದಿಂದ ಇಲ್ಲಿಯ ಶಾಸಕರಿಗೆ ಅನ್ಯಾಯವಾಗುತ್ತಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನ ೨೨೪ ಶಾಸಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಭರಾಟೆಯಲ್ಲಿ ಶಾಸಕರಿಗೆ ಬಿಡಿಗಾಸು ಅನುದಾನ ನೀಡಿಲ್ಲ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯಅವರಿಗೆ ಈಗ ಪಶ್ಚಾತಾಪವಾಗಿದ್ದು, ಅವರ ಆಪ್ತರ ಮೂಲಕ, ಲೋಕಸಭೆ ಚುನಾವಣೆಯ ಬಳಿಕ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಹೇಳಿಸುತ್ತಿದ್ದಾರೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ರಾಜಕಾರಣದಲ್ಲಿ ಪರಿಣಾಮಕಾರಿ ಬದಲಾವಣೆ ಆಗಲಿದೆ. ಕೇಂದ್ರ ಸಚಿವ ಪ್ರಹ್ಲಾ ಜೋಶಿ ಅವರು ಧಾರವಾಡ ಸಂಸದರಾಗಿ ಕಳೆದ ನಾಲಕ್ಕು ಅವಯಿಂದ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹೀಗಾಗಿ ನಿಸ್ಸಂದೇಹವಾಗಿ ಈಬಾರಿಯೂ ಅವರೇ ಧಾರವಾಡ ಲೋಕಸಭೆಗೆ ಬಿಜೆಪಿ ಅಭ್ಯರ್ಥಿ ಎಂದರು.