ಕೇರಳದಲ್ಲಿ ಇನ್ಮುಂದೆ ಮಾಸ್ಕ್ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಬೀಳುತ್ತೆ ದಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇರಳದಲ್ಲಿ ನಿಧಾನಗತಿಯಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ಬುಧವಾರ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ದಂಡ ಪ್ರಯೋಗ ಮಾಡಲಾಗುತ್ತದೆ ಎಂದು ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ರಾಜ್ಯಗಳ ಕೋವಿಡ್ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಬಳಿಕ ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಿದರು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈಗಾಗಲೇ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!