ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ಕಸಬೆ ಕ್ಯಾಂಪ್ ಬಳಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಮಾರಿಯಾ ಗೀತಾ (38) ಹಾಗೂ ಅಮಲ್ ಪಾಲ್ ಮೇರಿ (64) ಮೃತ ದುರ್ದೈವಿಗಳು.
ಖಾಸಗಿ ಬಸ್ ಹೈದ್ರಾಬಾದ್‌ನಿಂದ ಸಿಂಧನೂರು ಮಾರ್ಗವಾಗಿ ತೆರಳುತ್ತಿತ್ತು. ಗದಗದಿಂದ ರಾಯಚೂರಿಗೆ ಇನ್ನೋವಾ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅತಿವೇಗದಲ್ಲಿ ಬಂದ ಎರಡು ವಾಹನಗಳು ಡಿಕ್ಕಿ ಹೊಡೆದಿವೆ. ಇದರಿಂದ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಉಳಿದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.