ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು ಸೇರಿದಂತೆ ಓರ್ವ ಮಹಿಳೆ ಸಾವನ್ನಪ್ಪಿರುವಂತ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ.
ಸುನೀತಾ (34), ಶ್ಯಾಂ ಬಾಬು(29), ಶಿವನಾಗಲಿ(35) ಮೃತರು. ಮೃತರನ್ನು ಆಂಧ್ರಪ್ರದೇಶದ ಗುಂಟೂರಿನ ವೆಂಕಟಪುರಂ ಮೂಲದವರು ಎಂದು ಗುರುತಿಸಲಾಗಿದೆ. ಆಂಧ್ರದಿಂದ ಶಿವಮೊಗ್ಗಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿದ್ದ ಕಾರಿಗೆ, ಹೊಳಲ್ಕೆರೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆದು ಹೊಳಲ್ಕೆರೆಯ ಶವಾಗಾರಕ್ಕೆ ಸಾಗಿಸಲಾಗಿದೆ.