ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೂರತ್ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಘೋಷಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಈ ಬಗ್ಗೆ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ‘ಸೂರತ್ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸುವ ಕುರಿತು ಸಚಿವ ಸಂಪುಟ ನಿರ್ಧಾರವು ಸಂಪರ್ಕ ಮತ್ತು ವಾಣಿಜ್ಯ ಕ್ಷೇತ್ರವನ್ನು ಉತ್ತೇಜಿಸಲು ಸಹಕಾರಿಯಾಗಿದೆ’ ಎಂದಿದ್ದಾರೆ.