ಪರಿಶಿಷ್ಟ ಪಂಗಡಕ್ಕೆ ಹಾಲಕ್ಕಿ ಸಮುದಾಯ ಸೇರ್ಪಡೆಗೆ ಒತ್ತಾಯ: ಸರ್ಕಾರದಿಂದ ಪೂರ್ಣ ಪ್ರಯತ್ನ ಎಂದ ಸಚಿವ ಕೋಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂಬ ಬೇಡಿಕೆ ನ್ಯಾಯಸಮ್ಮತವಾಗಿದ್ದು ಈ ದಿಶೆಯಲ್ಲಿ ಸರ್ಕಾರದ ಪ್ರಯತ್ನ ಮುಂದುವರಿದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾವುದೇ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಬುಡಕಟ್ಟು ಸಂಸ್ಥೆಯ ಕುಲಶಾಸ್ತ್ರೀಯ ಅಧ್ಯಯನ ಅಗತ್ಯ ಆ ಅಧ್ಯಯನದ ವರದಿಯನ್ನು ಆಧರಿಸಿ ಸರ್ಕಾರ ನಿರ್ಣಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.
ಹಾಲಕ್ಕಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು ಕೇಂದ್ರ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸೂಚಿಸಿದೆ ಎಂದ ಅವರು ಗೌಳಿ ಸಮುದಾಯ ಸಹ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು ಆ ಕುರಿತು ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ ಮಾಡಲಾಗಿದೆ ಎಂದು ಸಚಿವ ಪೂಜಾರಿ ತಿಳಿಸಿದರು.
ಸರ್ಕಾರ ಪ್ರಯತ್ನ ಮಾಡುತ್ತಿಲ್ಲ ಎಂದು ಯಾರೆಲ್ಲ ಆರೋಪ ಮಾಡುತ್ತಾರೋ ಅವರೆಲ್ಲ ಆರೋಪ ಮಾಡಲೆಂದೇ ಇರುವವರು ಕೆಲವರು ಸಣ್ಣ ಆರೋಪ ಮಾಡಿದರೆ ಇನ್ನೂ ಕೆಲವರು ದೊಡ್ಡ ಆರೋಪ ಮಾಡುತ್ತಾರೆ,
ರಾಜಕಾರಣದಲ್ಲಿ ಇರುವವರೆಲ್ಲ ಚುನಾವಣೆ ಸಮೀಪಿಸುತ್ತಿದ್ದಂತೆ ಸ್ವಾಭಾವಿಕವಾಗಿ ಚುರುಕಾಗುತ್ತಾರೆ ಎಂದು ಅವರು ಹಾಸ್ಯ ಚಟಾಕಿ ಹಾರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!